ಗುಲ್ಬರ್ಗಾ

ಹಾಸ್ಟೆಲ್ ಸುಧಾರಣೆಗೆ ಆಗ್ರಹಿಸಿ ಪ್ರತಿಭಟನೆ

Published On :

ಯಾದಗಿರಿ: ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಅವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ವಸತಿ ನಿಲಯದ ಪ್ರದೇಶ ಬಯಸುವ ವಿದ್ಯಾರ್ಥಿಗಳ ಪೈಕಿ ಶೇ. 80ರಷ್ಟು ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಶೇ. 55ರಷ್ಟು ವಸತಿ ನಿಲಯಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದ ಹಾಸ್ಟೆಲ್‌ಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ಪ್ರತಿ ವರ್ಷ ಬಾಡಿಗೆ ರೂಪದಲ್ಲಿ ಕೋಟ್ಯಂತರ ಹಣ ಖಾಸಗಿ ವ್ಯಕ್ತಿಗಳಿಗೆ ಆರ್ಥಿಕವಾಗಿ ನೆರವಾಗುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಸ್ವಂತ ಕಟ್ಟಡವಿದ್ದರೂ ಕೊಠಡಿ ಸಮಸ್ಯೆಯಿದೆ. ಆದ್ದರಿಂದ ಸರ್ಕಾರ ಹೆಚ್ಚುವರಿ ಕೋಣೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಎಲ್ಲ ಹಾಸ್ಟೆಲ್‌ಗಳಲ್ಲಿ ಬಯೋವುಟ್ರಿಕ್ ವ್ಯವಸ್ಥೆ ಜಾರಿಗೊಳಿಸಬೇಕು. ವಿದ್ಯಾರ್ಥಿ ವೇತನ ಹೆಚ್ಚಿಸಬೇಕು. ಪ್ರತಿ ತಿಂಗಳೂ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಬೇಕು. ಪೋಷಕರ ವೇದಿಕೆ ರಚಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಶರಣಗೌಡ ಪಾಟೀಲ, ವೀರಭದ್ರ ಕಿರದಳ್ಳಿ, ಸಾಬಣ್ಣ ಬಸವರಾಜ, ಚಂದ್ರೇಶಖರ ಅವಿನಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.