'ಎನ್‌ಇಕೆಆರ್ಟಿಸಿ ಅಧ್ಯಕ್ಷ ಹುದ್ದೆಗೆ ಸಚಿವರ ಸ್ಥಾನಮಾನ'
ಗುಲ್ಬರ್ಗ: ಗುಲ್ಬರ್ಗ ಕೇಂದ್ರವಾಗಿರುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹುದ್ದೆಗೆ ಸರ್ಕಾರ ರಾಜ್ಯ ಸಚಿವರ ಸ್ಥಾನಮಾನ ನೀಡಿದೆ. ಫೆ.15ರಂದು ಈ ಕುರಿತಂತೆ ಸಿಎಂ ಶೆಟ್ಟರ್ ಅವರೇ ಆದೇಶ ಹೊರಡಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಾನಂದ ಕಲ್ಲೂರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಆದೇಶದ ಮೇರೆಗೆ ಕರ್ನಾಟಕ ಸರ್ಕಾರದ ಆಧಿಸೂಚನೆ ಸಂಖ್ಯೆ- ಸಿಆಸುಇ 17 ಶಿಸನೇ 2013, ದಿನಾಂಕ 15.2.2013ರನ್ವಯ ಈಕರಸಾ ಸಂಸ್ಥೆ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಿದೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಾನಂದ ಕಲ್ಲೂರ ಅವರಿಗೆ ಫೆ.6ರಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕಚೇರಿ ಇರುವ ಗುಲ್ಬರ್ಗದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ.ಎನ್. ಶಿವಮೂರ್ತಿಯವರು, ಇಲಾಖಾ ಮುಖ್ಯಸ್ಥರು ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪುಷ್ಟಗುಚ್ಛ ನೀಡಿ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದರು. ನಂತರ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಶಿವಾನಂದ ಕಲ್ಲೂರ, ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕರಾದ ಜಿ.ಎನ್. ಶಿವಮೂರ್ತಿ, ಇಲಾಖಾ ಎಲ್ಲ ಮುಖ್ಯಸ್ಥರು ಹಾಗೂ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಒಳಗೊಂಡು ಸಂಸ್ಥೆಯ ಪ್ರಗತಿ ಪರಿಶೀಲನೆ ಮಾಡಿದರು.
ಸಂಸ್ಥೆ ಅಭಿವೃದ್ಧಿಯತ್ತ ಸಾಗಲಿ: ಎಂಡಿ ಶಿವಮೂರ್ತಿ ನೇತೃತ್ವದಲ್ಲಿ ಸಂಸ್ಥೆಯು ಉತ್ತಮ ರೀತಿಯಲ್ಲಿ ಪ್ರಗತಿ ಸಾಧಿಸುತ್ತಿದ್ದು, ಇದೇ ರೀತಿ ಮುಂದಿನ ದಿನಗಳಲ್ಲಿಯೂ ಸಂಸ್ಥೆಯ ಎಲ್ಲ ಇಲಾಖಾ ಮುಖ್ಯಸ್ಥರ ಹಾಗೂ ಎಲ್ಲ ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳ ಸಹಕಾರದಿಂದ ಮತ್ತು ಪ್ರಗತಿಪರ ಕಾರ್ಯ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಸ್ಥೆಯು ಉತ್ತರೋತ್ತರವಾಗಿ ಅಭಿವೃದ್ಧಿಪಥದತ್ತ ಮುನ್ನಡೆಯಲಿ ಎಂದು ಅಧ್ಯಕ್ಷ ಕಲ್ಲೂರ ತಮ್ಮ ಆಶಯ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

