ಗುಲ್ಬರ್ಗಾ

ಅಕ್ರಮ ಮದ್ಯ ಮಾರಾಟ, ಕ್ರಮಕ್ಕೆ ದಸಂಸ ಒತ್ತಾಯ

Published On :

ಸುರಪುರ: ತಾಲೂಕಿನ ಹುಣಸಿಹೊಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದ್ದು, ಕೂಡಲೇ ಕಡಿವಾಣ ಹಾಕಿ ಸೂಕ್ತ ಕ್ರಮ ಜರುಗಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಕ್ಕೇರಾ ಹೋಬಳಿ ಶಾಖೆ ಅಬಕಾರಿ ನಿರೀಕ್ಷರನ್ನು ಒತ್ತಾಯಿಸಿದೆ. ಗ್ರಾಮದ ಪಾನ್ ಅಂಗಡಿ ಮತ್ತು ಹೋಟೆಲ್‌ಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಇದರಿಂದ ಕುಡುಕರ ಹಾವಳಿ ಹೆಚ್ಚಾಗಿದೆ. ಕುಡಿದ ಅಮಲಿನಲ್ಲಿ ಇತರರೊಂದಿಗೆ ವಿನಾಕಾರಣ ಜಗಳ, ಅವಾಚ್ಯ ಶಬ್ದಗಳ ಬಳಕೆ ಮಾಡುತ್ತಾರೆ. ಇದರಿಂದ ಗ್ರಾಮದ ವಾತಾವರಣ ಸಂಪೂರ್ಣ ಹದಗೆಟ್ಟು ಹೋಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಕಂಡೂ ಕಾಣದಂತೆ ಕುರುಡು ಜಾಣತನ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ: ನಕಲಿ ಬ್ರಾಂಡ್ ಮದ್ಯ ಮಾರಾಟವಾಗುತ್ತಿದೆ. ಇದೆಲ್ಲದಕ್ಕೂ ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ತಕ್ಷಣ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ವಿಳಂಬ ನೀತಿ ಅನುಸರಿಸಲ್ಲಿ ಗ್ರಾಮದ ಮಹಿಳೆಯರೊಂದಿಗೆ ಅಬಕಾರಿ ಇಲಾಕೆಯ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ದಸಂಸ ಮುಖಂಡರಾದ ಮಾನಪ್ಪ ಚಲುವಾದಿ, ಮರಿಲಿಂಗಪ್ಪ ಗುಡಿಮನಿ ಅಬಕಾರಿ ಅಧಿಕಾರಿಗಳಿಗೆ ಬರೆದ ದೂರಿನಲ್ಲಿ ಎಚ್ಚರಿಸಿದ್ದಾರೆ.
'ವಿದ್ಯಾರ್ಥಿಗೆ ಶಿಸ್ತು ಅವಶ್ಯ'
ಯಾದಗಿರಿ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಹನೆ ಅಳವಡಿಸಿಕೊಳ್ಳುವುದು ಅಗತ್ಯ. ಉನ್ನತ ಗುರಿಯೊಂದಿಗೆ ಸತತ ಪರಿಶ್ರಮ ವಹಿಸಿದರೆ ಸಾಧನೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ಹೇಳಿದರು.  ಇಲ್ಲಿಯ ಮಹಾತ್ಮ ಗಾಂಧಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪ್ರೊಬೆಶನರಿ ಉಪವಿಭಾಗಾಧಿಕಾರಿ, ನಾಸೀರ ಅಹ್ಮದ್, ನಾಜಿಂ ಅಹ್ಮದ್, ಪಾಂಡುರಂಗ, ಯಲ್ಲಪ್ಪ, ದರ್ಮೇಂದ್ರ, ಆರೋಗ್ಯನಾಥನ್, ಸಲೀಮ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.