ಸಂವಿಧಾನ ಗೌರವಿಸುವುದು ಎಲ್ಲರ ಕರ್ತವ್ಯ: ಜೇವರ್ಗಿ
ಸುರಪುರ: ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಇತರೆ ದೇಶಗಳಿಗಿಂತ ಭಾರತದ ಸಂವಿಧಾನ ಸರ್ವಶ್ರೇಷ್ಠವಾಗಿದೆ. ಡಾ. ಅಂಬೇಡ್ಕರರು ಲಿಖಿತ ಸಂವಿಧಾನವನ್ನು ಒದಗಿಸಿ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳಿಗೆ ವಿಶೇಷ ಆದ್ಯತೆ ನೀಡಿದ್ದಾರೆ. ಪ್ರತಿಯೊಬ್ಬ ನಾಗರಿಕನು ಸಂವಿಧಾನವನ್ನು ಗೌರವಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಪ್ರಭು ಕಾಲೇಜಿನ ಉಪನ್ಯಾಸಕ ವೇಣುಗೋಪಾಲ ಜೇವರ್ಗಿ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ರಚನೆ ಮತ್ತು ನಾಗರಿಕರ ಹಕ್ಕುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಸಂವಿಧಾನದ ವೈಶಿಷ್ಟ್ಯ: ವಯಸ್ಕ ಮತದಾನ ಪದ್ಧತಿ ಸಂವಿಧಾನದ ವೈಶಿಷ್ಟ್ಯವಾಗಿದೆ. ಸರ್ವರಿಗೂ ಸಮಪಾಲು, ಸಮಬಾಳು ಕಲ್ಪಿಸುವ ನಿಟ್ಟಿನಲ್ಲಿ ಜಾತ್ಯತೀತ ತತ್ವ ಅಳವಡಿಸಲಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನು ತನ್ನ ಹಕ್ಕುಗಳನ್ನು ಪಡೆದುಕೊಳ್ಳಲು ಮತ್ತು ರಕ್ಷಣೆ ಮಾಡಿಕೊಳ್ಳುವ ವಿಧಾನವನ್ನು ಒಳಗೊಂಡಿದೆ. ಇದು ಸರಳ ಮತ್ತು ಕಠಿಣ ಸಂವಿಧಾನವಾಗಿದೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಸಂಗಣ್ಣ ರಾಂಪುರೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ. ರಾಘವೇಂದ್ರ ಗುಡುಗುಂಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಸಿದ್ದಪ್ಪ ದಿಗ್ಗಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಕಮತಗಿ ಕಾರ್ಯಕ್ರಮ ನಿರೂಪಿಸಿದರು. ಗೀತಾ ಪಾಟೀಲ ವಂದಿಸಿದರು. ಚಿದಾನಂದ ಆನೂರ, ಶಿವಶರಣಪ್ಪ ಬಿರಾದಾರ, ಶರಣಗೌಡ ಪಾಟೀಲ, ಗುರುರಾಜ ಬಾಡಿಯಾಳ, ಸಾವಿತ್ರಿ ಕುಲಕರ್ಣಿ, ಬಸವರಾಜ ಪೂಜಾರಿ, ನಾಗರಾಜ ಉಪ್ಪಾರ, ಜಗದೀಶ ತಂಬಾಕೆ, ರಾಜಶೇಖರ ಮಡಿವಾಳ, ರಮೇಶ ಪೋತೆ,ಶಶಿಕಿರಣ ಅಂಚಿನಾಳ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

