ಕಟ್ಟುನಿಟ್ಟಿನಲ್ಲಿ ನಡೆದ ನವೋದಯ ಪ್ರವೇಶ ಪರೀಕ್ಷೆ
ಸುರಪುರ: ಜವಹಾರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗಳು ತಾಲೂಕಿನ ಐದು ಕೇಂದ್ರಗಳಲ್ಲಿ ಭಾನುವಾರ ಕಟ್ಟುನಿಟ್ಟಾಗಿ ನಡೆದವು. 1652 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. ಪರೀಕ್ಷೆ ಸುಸೂತ್ರವಾಗಿ ನಡೆಯಲು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಅಧೀಕ್ಷಕ, ಒಬ್ಬ ಪರೀಕ್ಷಾ ನಿರೀಕ್ಷಕರನ್ನು ಹಾಗೂ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕೂಡಲು ಆಸನ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಆದರೆ ನಿಯಮನುಸಾರ ಪರೀಕ್ಷಾ ಕೇಂದ್ರದಿಂದ 30 ಮೀಟರ್ ಒಳಗಡೆ ಪ್ರವೇಶ ನಿರ್ಬಂಧವಿತ್ತು. ಸುತ್ತಲೂ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾ ಗಿತ್ತು. ಇಲ್ಲಿನ ಬಾಲಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 436 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, ಪ್ರಭು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 426, ಬಾಲಕಿಯರ ಸ.ಪ.ಪೂ.ಕಾಲೇಜಿನಲ್ಲಿ 273, ಕೆಂಭಾವಿ ಕೇಂದ್ರದಲ್ಲಿ 250, ಹುಣಸಗಿ ಕೇಂದ್ರದಲ್ಲಿ 267 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ವಿ. ಕೆಂಪರಂಗಯ್ಯ ಪರೀಕ್ಷೆಯ ಉಸ್ತುವಾರಿ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಾಂಜನೇಯ, ಶಹಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ರಾಯಪ್ಪ ರೆಡ್ಡಿ ಭೇಟಿ ನೀಡಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

