ಗುಲ್ಬರ್ಗಾ

ನೇಮಕಾತಿ ತಡೆಗಾಗಿ ಇಂದು ಪ್ರತಿಭಟನೆ

Published On :

ಯಾದಗಿರಿ: ಹೈದರಾಬಾದ್ ಕರ್ನಾಟಕ ಪ್ರದೇಶದ ವಿಶೇಷ ಅಭಿವೃದ್ಧಿಗಾಗಿ ಸಂವಿಧಾನದ 371(ಜೆ) ಕಲಂ ಜಾರಿಯಾಗಿದ್ದು, ಇದು ಅನುಷ್ಠಾನಕ್ಕೆ ಬರುವವರೆಗೂ ರಾಜ್ಯ ಸರ್ಕಾರ ಯಾವುದೇ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಬಾರದು ಎಂದು ಒತ್ತಾಯಿಸಲಾಗುತ್ತಿದ್ದರೂ. 4 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿರುವುದನ್ನು ವಿರೋಧಿಸಿ 11ರಂದು ನಗರದಲ್ಲಿ ಬೆ.11-30ಕ್ಕೆ ನಗರದ ಶಾಸ್ತ್ರಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜೈ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ಶ್ರೀಕಾಂತ ಭೀಮನಳ್ಳಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಶಿಕ್ಷಕರ ನೇಮಕಾತಿ ನಡೆಸುವುದರಿಂದ ನಮ್ಮ ಭಾಗದಲ್ಲಿ ಈಗಾಗಲೇ ಡಿಇಡಿ ಕೋರ್ಸ್ ಪೂರ್ಣಗೊಳಿಸಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ ಎಂದರು.
---
ಪ್ರಶಸ್ತಿ ಪತ್ರ ವಿತರಣೆ
ಗುಲ್ಬರ್ಗದ ಕಸಾಪದಲ್ಲಿ ಮಹಾನಗರ ಪಾಲಕೆ ಹಾಗೂ ಮಧುರಾ ಕಂಪ್ಯೂಟರಸ್ ಎಜ್ಯುಕೇಶನ್ ಅಂಡ್ ಡೆವಲಪಮೆಂಟ್ ಸೆಂಟರ್ ವತಿಯಿಂದ ಕಂಪ್ಯೂಟರ್ ಮತ್ತು ಮೊಬಾಯಿಲ್ ರಿಪೇರಿ ತರಬೇತಿಯ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ದಕ್ಷಿಣ ವಲಯ ಶಾಸಕರಾದ ಅರುಣಾ ಸಿ.ಪಾಟೀಲ್ ರೇವೂರ ಉದ್ಘಾಟಿಸಿ ಪ್ರಶಸ್ತಿ ಪತ್ರ ವಿತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.