ಪ್ರತಿಭೆಯಿಂದ ಗೌರವ: ಡಿಡಿಪಿಐ

Updated on: 

ಯಾದಗಿರಿ: ನಮ್ಮಿಂದ ಏನೂ ಸಾಧನೆ ಮಾಡಲಾಗದು. ಸಮಾಜ ನಮ್ಮನ್ನು ಬೇರೆ ದೃಷ್ಟಿಯಿಂದ ನೋಡುತ್ತದೆ ಎಂಬ ಅಳಕು ಇಟ್ಟುಕೊಳ್ಳದೆ ನಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಿದಾಗ ಸಮಾಜದಲ್ಲಿ ಗೌರವ ತಾನಾಗೇ ಸಿಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಾಂಜನಯ್ಯ ಹೇಳಿದರು. ನಗರದ ಪಪೂ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ 14ರಿಂದ 17 ವರ್ಷದ ವಿಲಚೇತನ ಮಕ್ಕಳ  ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು. ಅಂಗವಿಕಲರು ಕ್ರೀಡೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ್ದನ್ನು ನೆನಪಿಸಿಕೊಳ್ಳಬೇಕು. ಸಾಧಿಸುವ ಛಲ ಇದ್ದಾಗ ಅಸಾಧ್ಯ ಎಂಬುದು ಇಲ್ಲ. ಆದ್ದರಿಂದ ಸರ್ಕಾರ ನೀಡುವ ಸೌಲಭ್ಯಗಳ ಲಾಭ ಪಡೆದು ಕ್ರೀಡೆಯಲ್ಲಿ ಮುಂದೆ ಬರುವಂತೆ ಅವರು ಕರೆ ನೀಡಿದರು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಎ.ಎಸ್.ಜುಗೇರಿ, ಕ್ರೀಡೆಯಲ್ಲಿ ಸೋಲು ಗೆಲವು ಸಾಮಾನ್ಯ. ಅದರ ಬಗ್ಗೆ ಚಿಂತೆ ಮಾಡದೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಸೂಗಪ್ಪ ಪಾಟೀಲ, ಶಿಕ್ಷಣಾಧಿಕಾರಿ ವೆಂಕೋಬಾ, ಶಂಕರ ಸೋನಾರ ಇತರರು ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಪಾಲ್ಗೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com