ಗುಲ್ಬರ್ಗಾ

ನಾಳೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ

Published On :

ಗುಲ್ಬರ್ಗ: ನಗರದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿ ಈಶಾನ್ಯ ವಲಯದ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ ಅಂಗವಾಗಿ ಫೆ.15 ರಂದು ಸಾಯಂಕಾಲ 4.30ಕ್ಕೆ ವಿಭಾಗೀಯ ಕಚೇರಿ ಹಿಂದುಗಡೆ ಇರುವ ಈಶಾನ್ಯ ರಂಗ ಮಂಟಪದಲ್ಲಿ ವರಕವಿ ದ.ರಾ. ಬೇಂದ್ರೆ ಅವರ ಬದುಕು ಮತ್ತು ಬರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಕ್ರಿಯಾ ಸಮತಿಯ ಕಾರ್ಯದರ್ಶಿ ವೀರಭದ್ರಪ್ಪ ಅರಕೇರಿ ತಿಳಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗದ ಉಪನ್ಯಾಸಕ ಪ್ರೊ. ವಿ.ಜಿ. ಪೂಜಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ನೂತನ ವಿದ್ಯಾಲಯ ಪ್ರಾಂಶುಪಾಲ ಡಾ. ಸ್ವಾಮಿರಾವ್ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಹಾಗೂ ವಿಶೇಷ ಉಪನ್ಯಾಸಕರಾಗಿ ಆಗಮಿಸಲಿದ್ದಾರೆ. ನೌಕರರ ಮಹಾ ಮಂಡಳದ ಅಧ್ಯಕ್ಷ ಚಂದ್ರಕಾಂತ ಗದ್ದಗಿ, ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎಚ್. ನಾಗೇಶ ಮತ್ತು ಇನಾಯತ್ ಭಾಗವಾನ ಅತಿಥಿಗಳಾಗಿ ಆಗಮಿಸುವರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ.ಎನ್. ಶಿವಮೂರ್ತಿ ಅಧ್ಯಕ್ಷತೆ ವಹಿಸುವರು.
ಗೀತ ಗಾಯನ, ನೃತ್ಯ ರೂಪಕ: ಕಾರ್ಯಕ್ರಮದ ನಿಮಿತ್ತ ನೂತನ ವಿದ್ಯಾಲಯದ ಸಂಗೀತ ಶಿಕ್ಷಕ ಮಹೇಶ ಬಡಿಗೇರ ಹಾಗೂ ತಂಡದವರಿಂದ ಬೇಂದ್ರೆಯವರ ಭಾವಗೀತೆಗಳ ಗೀತಗಾಯನ ನಡೆಯಲಿದೆ. ಕುಮಾರಿ ಅಭಯ ನಿರ್ದೇಶನದ ಕಿಶೋರಿ ತಂಡ ಗುಲ್ಬರ್ಗ ವತಿಯಿಂದ ಕುರುಡು ಕಾಂಚಾಣ ಗೀತೆಯ ನೃತ್ಯರೂಪಕವಿರುತ್ತದೆ. ಸಾರಿಗೆ ಕಲಾ ಬಳಗದ ವತಿಯಿಂದ ಸಂಗೀತ ರಸ ಮಂಜರಿ ಕಾರ್ಯಕ್ರಮ ನಡೆಯಲಿದೆ.
ಆದ್ದರಿಂದ ಸಂಸ್ಥೆಯ ಸಿಬ್ಬಂದಿ ಹಾಗೂ ಅವರ ಕುಟಂಬದವರು ಮತ್ತು ಸಾಹಿತ್ಯಾಭಿಮಾನಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.