ವಾಡಿ- ಗದಗ ರೇಲ್ವೆ ಕಾಮಗಾರಿ ಆರಂಭಕ್ಕೆ ಒತ್ತಾಯ
ಯಾದಗಿರಿ: ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿ ನೆನೆಗುದಿಗೆ ಬಿದ್ದಿರುವ ವಾಡಿ- ಗದಗ ರೈಲ್ವೆ ಮಾರ್ಗ ಕಾಮಗಾರಿಗೆ ಈ ಬಾರಿ ರೇಲ್ವೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸಿ ಕಾಮಗಾರಿ ಶೀಘ್ರ ಆರಂಭಿಸಬೇಕೆಂದು ಒತ್ತಾಯಿಸಿ ಕನ್ನಡ ಸೇನೆ ಕರ್ನಾಟಕ ಸಂಘಟನೆ ಬುಧವಾರ ಇಲ್ಲಿಯ ರೇಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿತು.
ಸಂಘಟನೆ ಜಿಲ್ಲಾಧ್ಯಕ್ಷ ರಾಜು ಕುಂಬಾರ ಜಾಲಿಬೆಂಚಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಿಲ್ದಾಣ ವ್ಯವಸ್ಥಾಪಕರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹಿಂದೆ ಮಮತಾ ಬ್ಯಾನರ್ಜಿರ ರೇಲ್ವೆ ಮಂತ್ರಿಗಳಾಗಿದ್ದಾಗ ಯಾದಗಿರಿ, ಶಹಾಪುರ ಮತ್ತು ಸುರಪುರದ ಮೂಲಕ ಹಾದುಹೊಗುವ ವಾಡಿಯಿಂದ ಗದಗವರೆಗೆ ನೂತನ ರೈಲ್ವೆ ಮಾರ್ಗ ನಿರ್ಮಾಣದ ಕುರಿತು ಬಜೆಟ್ನಲ್ಲಿ ಘೋಷಿಸಲಾಗಿತ್ತು. ಈ ಮಾರ್ಗದ ರೇಲ್ವೆ ಕಾಮಗಾರಿಗಾಗಿ ಅನುದಾನ ಘೊಷಣೆ ಮಾಡಲಾಗಿತ್ತು. ಆದರೆ ಇದುವರೆಗೆ ಕಾಮಗಾರಿ ಪ್ರಾರಂಭವಾಗಿಲ್ಲ. ಇದಕ್ಕೆ ಕೇಂದ್ರ- ರಾಜ್ಯ ಸರ್ಕಾರಗಳೆರಡರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದರು. ಈ ಮಾರ್ಗದಲ್ಲಿ ರೇಲ್ವೆ ಓಡಾಟದಿಂದ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ. ಆದ್ದರಿಂದ ಈ ಬಾರಿ ರೈಲ್ವೆ ಆಯವ್ಯಯ ಮಂಡನೆಯಲ್ಲಿ ಈ ಕಾಮಗಾರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ರಾಜು ಕಲಾಲ್, ವಿಶ್ವನಾಥ ರೆಡ್ಡಿ ಅಲ್ಲೂರ, ಮೌನೇಶ ಸುರಪುರಕರ್, ವೀರೇಶ ಅಂಗಡಿ, ದಶರಥ್ ಮುಂಡರಗಿ, ಹಣಮಂತ ಕಲಾಲ್, ಸುಭಾಶ, ಸಿದ್ದಲಿಂಗ ರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

