ವೇತನದಲ್ಲೇಕೆ ಇಬ್ಬಗೆ ನೀತಿ?
ಯಾದಗಿರಿ: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ಮತ್ತು ಪದವಿ ಪೂರ್ವ ಉಪನ್ಯಾಸಕರ ಸಂಘದ ಜಿಲ್ಲಾ ಘಟಕಗಳು ಬುಧವಾರ ಒಂದು ದಿನದ ಸಾಂಕೇತಿಕ ಧರಣಿ ನಡೆಸಿದವು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಶಿಕ್ಷಕರು, ಬಳಿಕ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗಿಂತ ಶಿಕ್ಷಕರು ಮತ್ತು ಉಪನ್ಯಾಸಕರು ಕಡಿಮೆ ವೇತನ ಪಡೆಯುತ್ತಿದ್ದಾರೆ. ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ತಾರತಮ್ಯ ನಿವಾರಿಸುವ ಮತ್ತು ಗ್ರಾಮೀಣ, ಪಟ್ಟಣ ಪ್ರದೇಶಗಳಲ್ಲಿನ ಶಿಕ್ಷಕರ ಮನೆ ಬಾಡಿಗೆ ಹೆಚ್ಚಿಸಬೇಕೆಂದು ಆಗ್ರಹಿಸಿದರು.
ಭತ್ಯೆ ಹೆಚ್ಚಿಸಿ: ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಂಡಿಸಿದ ಬಜೆಟ್ನಲ್ಲಿ ಶಿಕ್ಷಕರ, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಮತ್ತು ಮೂಲ ವೇತನದಲ್ಲಿ ವಿಶೇಷ ವೇತನ ವಿಲೀನಗೊಳಿಸದ ಬಗ್ಗೆ ಅತ್ಯಂತ ನಿರಾಸೆಯಾಗಿದೆ. ಶಿಕ್ಷಕ ಸಮುದಾಯಕ್ಕೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ಮನೆ ಬಾಡಿಗೆ ಭತ್ಯೆ ಮತ್ತು ನಗರ ಭತ್ಯೆಗಳನ್ನು ಹೆಚ್ಚಿಸುವಂತೆ ಈಗಾಗಲೇ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರ ಕೂಡಲೇ ನಮ್ಮ ಸಮಸ್ಯೆಗೆ ಸ್ಪಂದಿಸಬೇಕು ಎಂದು ಶಿಕ್ಷಕರು ಒತ್ತಾಯಿಸಿದರು.
ಏರಿಕೆಗೆ ಸ್ಪಂದಿಸಿ: ಗ್ರಾಮೀಣ ಪ್ರದೇಶದಲ್ಲಿ ಎಷ್ಟೇ ಒತ್ತಡವಿದ್ದರೂ ಶಿಕ್ಷಕ ಸಮುದಾಯ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ನಮ್ಮ ಬೇಡಿಕೆಯನ್ನು ಸರ್ಕಾರ ಪರಿಗಣಿಸಬೇಕು. ಪಟ್ಟಣ ಪ್ರದೇಶದಲ್ಲಿನ ಮನೆ ಬಾಡಿಗೆಯನ್ನು ಶೇ.10ರಿಂದ 20ಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಶಂಕರಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಅಶೋಕ ಕೆಂಭಾವಿ, ಸಿದ್ದಪ್ಪ ಆವಂಟಿ, ಎಂ.ಎಸ್ ಪಾಟೀಲ, ನಾಗೇಂದ್ರ, ಚಂದ್ರಕಾಂತ ಕಣ್ಣುರ, ಬಸವರಾಜ ವಂದಲಿ, ರಾಜಶೇಕರ ಗೌಡ, ಅರವಿಂದ ಪಾಟೀಲ, ವಿಠ್ಠಲ ಚವ್ಹಾಣ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

