ಯಾದಗಿರಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ತುಮಕೂರು ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಮಲ್ಲಮ್ಮ(11) ಮೃತ ಬಾಲಕಿ. ಪಾಲಕರೊಂದಿಗೆ ಈಕೆ ಹೊಲಕ್ಕೆ ಹೋಗಿದ್ದಳು. ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ತೀವ್ರ ಅಸ್ವಸ್ಥಳಾಗಿದ್ದಾಳೆ. ನಂತರ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.