ಗುಲ್ಬರ್ಗಾ

ಭಾರತ್ ಬಂದ್‌ಗೆ ಸಂಘಟನೆಗಳ ಬೆಂಬಲ

Published On :

ಗುಲ್ಬರ್ಗ: ಬೆಲೆ ಏರಿಕೆ ನಿಯಂತ್ರಣಕ್ಕಾಗಿ ನಿರ್ಧಿಷ್ಟ ಕ್ರಮವಹಿಸಬೇಕು, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ಧುಗೊಳಿಸಬೇಕು, ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ 10 ಸಾವಿರ ಮಾಸಿಕ ವೇತನ ನೀಡಬೇಕು. ಸಾರ್ವಜನಿಕರ ಕ್ಷೇತ್ರದ ಉದ್ದಿಮೆಗಳ ಖಾಸಗೀಕರಣ ನೀತಿಗೆ ವಿರೋಧ ಸೇರಿದಂತೆ ಸರ್ಕಾರದ ವಿವಿಧ ಜನವಿರೋಧ ನೀತಿಗಳನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಫೆ.20 ಮತ್ತು 21ರಂದು ಸಾರ್ವತ್ರಿಕ ಮುಷ್ಕರ ನಡೆಸಲು ನಿರ್ಧರಿಸಿದೆ.
ಎಐಟಿಯುಸಿ, ಆಲ್‌ಇಂಡಿಯಾ ಯುಟಿಯುಸಿ, ಬಿಎಂಎಸ್, ಐಎನ್‌ಟಿಯುಸಿ, ಹೆಚ್‌ಎಂಎಸ್, ಸಿಐಟಿಯು, ಎಲ್‌ಪಿಎಫ್, ಟಿಯುಸಿಸಿ, ಎಐಸಿಸಿಟಿಯು, ಯುಟಿಯುಸಿ ಮತ್ತು ಬ್ಯಾಂಕು ವಿಮಾ, ಸರ್ಕಾರಿ ಸಂಘಟನೆಗಳು ಸೇರಿದಂತೆ ಒಟ್ಟು 11 ಸಂಘಟನೆಗಳು ಒಂದಾಗಿ ಈ ಪ್ರತಿಭಟನೆಗೆ ಕರೆ ನೀಡಿದೆ ಎಂದು ಆಲ್ ಇಂಡಿಯಾ ಯುಟಿಯುಸಿ ಜಿಲ್ಲಾ ಸಂಚಾಲಕ ಕೆ. ಸೋಮಶೇಖರ ಹಾಗೂ ಎಐಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೌಕತ್ ಅಲಿ ಆಲೂರ ತಿಳಿಸಿದ್ದಾರೆ.
ಬೆಲೆ ಏರಿಕೆ ನಿಯಂತ್ರಿಸಬೇಕು, ಜನರನ್ನು ಬಿಪಿಎಲ್ ಮತ್ತು ಎಪಿಎಲ್ ಎಂದು ವಿಂಗಡಿಸುವುದನ್ನು ಕೈಬಿಟ್ಟು ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿಗೊಳಿಸಬೇಕು. ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ನೇರ ಬಂಡವಾಳ ರದ್ದುಗೊಳಿಸಿ, ಸಾರ್ವತ್ರಿಕ ಕ್ಷೇತ್ರ ಕೈಗಾರಿಕೆಗಳ ಷೇರು ಮಾರಾಟ ನಿಲ್ಲಿಸಬೇಕು.
ಬೋನಸ್, ಭವಿಷ್ಯನಿಧಿ ಪಾವತಿಗೆ ಇರುವ ಎಲ್ಲಾ ಮಿತಿ ಹಾಗೂ ಅರ್ಹತೆಗಳನ್ನು ತೆಗೆದು ಹಾಕಿ ಗ್ರಾಚ್ಯುಟಿ ಮೊತ್ತವನ್ನು ಏರಿಸಿ, ಎಲ್ಲರಿಗೂ ನಿವೃತ್ತಿ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾದ್ಯಂತ ವಿವಿಧ ತಾಲೂಕುಗಳು ಹಾಗೂ ಕೈಗಾರಿಕಾ ಕೇಂದ್ರಗಳಲ್ಲಿ ಸಭೆ ಸಮಾವೇಶಗಳನ್ನು ಮತ್ತು ಗುಲ್ಬರ್ಗ ನಗರದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾ ಸಂಚಾಲಕ ಕೆ. ಸೋಮಶೇಖರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.