ಗುಲ್ಬರ್ಗಾ

ಜಿಲ್ಲಾ ಮಟ್ಟದ ಯುವಜನ ಮೇಳ (ಸುದ್ದಿ ಸಂಕ್ಷೇಪ)

Published On :

ಗುಲ್ಬರ್ಗ: ಜಿಲ್ಲಾ ಪಂಚಾಯತ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಚಂದ್ರಶೇಖರ ಪಾಟೀಲ್ ಸಭಾಂಗಣದಲ್ಲಿ ಜಿಲ್ಲಾ ಜಿಲ್ಲಾಮಟ್ಟದ ಯುವ ಜನಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಶರಣಪ್ಪ ಪಾಟೀಲ್ ತೇಲ್ಕೂರು ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಯಶ್ರೀ ಅಶೋಕ ಸಾವೇಳಕೇರ ಅಧ್ಯಕ್ಷತೆ ವಹಿಸುವರು. ಜಿಪಂ ಉಪಾಧ್ಯಕ್ಷ ಪಾರ್ವತಿಬಾಯಿ ಶಂಕರ ಚವ್ಹಾಣ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸುಭಾಷ ವಗ್ಗನಕರ್, ರೇಣುಕಾ ಗಂಗಾಧರ ಪಾಂಡೆ, ಸುರೇಶ ಬಡಿಗೇರಾ ಸೇರಿದಂತೆ ಇನ್ನಿತರರು ಇದ್ದರು.
ವ್ಯಂಗ್ಯಚಿತ್ರ ಪ್ರದರ್ಶನ
ಗುಲ್ಬರ್ಗ: ಚೈತನ್ಯಮಯಿ ಆರ್ಟ್ ಗ್ಯಾಲರಿಯ ದಶಮಾನೋತ್ಸವ ಪ್ರಯುಕ್ತ ದಿ ಐಡಿಯಲ್ ಫೈನ್ ಆರ್ಟ್ ಸಂಸ್ಥೆಯ ಸಹಯೋಗದೊಂದಿಗೆ ವ್ಯಂಗ್ಯಚಿತ್ರ ಕಲಾವಿದ ಎಂ. ಸಂಜೀವ ರಚಿಸಿದ ವ್ಯಂಗ್ಯ ಚಿತ್ರಗಳ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರು ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಎಂಎಂಕೆ ಕಾಲೇಜ್ ಆಫ್ ವಿಜುವಲ್ ಆರ್ಟ್ ಪ್ರಾಚಾರ್ಯ ಡಾ. ಪೂರ್ಣಿಮಾ ಪಾಟೀಲ್ ಹಾಗೂ ಚೈತನ್ಯಮಯಿ ಆರ್ಟ್ ಗ್ಯಾಲರಿ ನಿರ್ದೇಶಕ ಎ.ಎಸ್. ಪಾಟೀಲ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.