ಚಿಂಚೋಳಿ: ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ನೀತಿ ಖಂಡಿಸಿ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಮತ್ತು ಗುರುವಾರ ನೀಡಿದ ಬಂದ್ ಕರೆಯಿಂದಾಗಿ ಪಟ್ಟಣದಲ್ಲಿ ಬುಧವಾರ ನಡೆಸಿದ ರಸ್ತೆ ತಡೆಯಿಂದಾಗಿ ವಾಹನಗಳ ಸಂಚಾರವಿಲ್ಲದೆ ಜನರು ತೊಂದರೆ ಪಡುವಂತಾಯಿತು.
ಪಟ್ಟಣದ ಕರ್ನಾಟಕ ಪ್ರಾಂತ ರೈತ ಕೂಲಿ ಕಾರ್ಮಿಕ ಸಂಘ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯ ಸಂಘ, ಬಿಸಿಯೂಟ ಸಹಾಯಕರ ಸಂಘ, ಗ್ರಾಮ ಪಂಚಾಯತ್ ನೌಕರರ ಸಂಘ ಮತ್ತು ಇನ್ನಿತರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳು ಕೂಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡ ವರ್ಗದ ಜನರ ಜೀವನ ಅತ್ಯಂತ ಗಂಭೀರಮಯವಾಗಿದೆ.
ದಿನ ನಿತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಭಾರಿ ತೊಂದರೆ ಅನುಭವಿಸಬೇಕಾಗಿದೆ. ಬೆಲೆ ಏರಿಕೆ ನಿಯಂತ್ರಣಗೊಳಿಸುವಂತೆ ಕಾರ್ಮಿಕ ಸಂಘಟನೆಗಳು ಅನೇಕ ಸಲ ಬಂದ್ ಮೂಲಕ ಪ್ರತಿಭಟಿಸಿದರು ಸಹಾ ನಮ್ಮ ಬೇಡಿಕೆಗಳನ್ನು ಇಡೇರಿಸಲಿಲ್ಲವೆಂದು ಕಾರ್ಮಿಕ ಸಂಘಟನೆಗಳ ಮುಖಂಡ ಶರಣಬಸ್ಸಪ್ಪಾ ಮಮಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕ ಸಂಘಟನೆಗಳು ನೀಡಿದ ಬಂದ್ ಕರೆಯಿಂದಾಗಿ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಚಿಂಚೋಳಿ- ತಾಂಡೂರ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿ ಮೇಲೆ ಸಂಚರಿಸುವ ವಾಹನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ಜನರು ಭಾರಿ ತೊಂದರೆ ಪಡುವಂತಾಯಿತು. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿತ್ತು.
ಶರಣಬಸ್ಸಪ್ಪಾ ಮಮಶೆಟ್ಟಿ, ಜಯಶ್ರೀ ದೊಡ್ಡಮನಿ, ಶಾಂತಾಬಾಯಿ ಚಿಮ್ಮನಚೋಡ್, ಮಹಾದೇವಿ ಪೋಲಕಪಳ್ಳಿ, ಭಾಗಣ್ಣ ಸಾಲೇಬೀರನಳ್ಳಿ, ಸಿದ್ದಲಿಂಗಯ್ಯ ಸ್ವಾಮಿ, ಶಿವಾನಂದ್ ಮುಂತಾದವರು ನೇತೃತ್ವ ವಹಿಸಿದರು ಚಿಂಚೋಳಿ ಪೋಲಿಸರು ಸೂಕ್ತ ಬಂದೋಬಸ್ತ ವ್ಯವಸ್ಥೆಗೊಳಿಸಿದರು.