ಹಾಸ್ಟೆಲ್ ನಿರ್ವಹಣೆಗೆ ಸ್ವಾಯತ್ತ ಪ್ರಾಧಿಕಾರ ರಚಿಸಿ
ಯಾದಗಿರಿ: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಸತಿ ನಿಲಯಗಳ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಆದ್ದರಿಂದ ಹಾಸ್ಟೆಲ್ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ರಾಜ್ಯ ಉಪಾಧ್ಯಕ್ಷ ಡಾ.ಅಲ್ಲಮಪ್ರಭು ಆಗ್ರಹಿಸಿದರು.
ಇಲ್ಲಿಯ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಎಬಿವಿಪಿ ನಡೆಸಿದ ಸಮೀಕ್ಷಾ ವರದಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ರಾಜ್ಯದ ಮೆಟ್ರಿಕ್ ನಂತರದ ಹಾಸ್ಟೆಲ್ಗಳ ಸ್ಥಿತಿ ಅತ್ಯಂತ ಭಯಾನಕವಾಗಿದೆ. ವಿದ್ಯಾರ್ಥಿಗಳು ಅಲ್ಲಿ ಅಭ್ಯಾಸ ಮಾಡುವ ವಾತಾವರಣವೇ ಇಲ್ಲ. ಸಂಘಟನೆಯ ನೂರು ಕಾರ್ಯಕರ್ತರ ತಂಡ ರಾಜ್ಯಾದ್ಯಂತ ಸಂಚರಿಸಿ 260 ಹಾಸ್ಟೆಲ್ಗಳ ಪರಿಸ್ಥಿತಿಯನ್ನು ಸಮೀಕ್ಷೆ ನಡೆಸಿದೆ. ಅಲ್ಲಿ ಮಕ್ಕಳಿಗೆ ಮೂಲ ಸೌಲಭ್ಯ ಸಿಗದಿರುವುದು ಬೆಳಕಿಗೆ ಬಂದಿದೆ. ಶೇ.45ರಷ್ಟು ಹಾಸ್ಟೆಲ್ಗಳಿಗೆ ಸ್ವಂತ ಕಟ್ಟವೇ ಇಲ್ಲ. ಆದ್ದರಿಂದ ಖಾಸಗಿ ವ್ಯಕ್ತಿಗಳಿಗೆ ಸರ್ಕಾರದ ಹಣ ಹೋಗುವಂತಾಗಿದೆ. ಜತೆಗೆ ಅಲ್ಲಿ ಸೌಲಭ್ಯವೂ ಇಲ್ಲ. ಆದ್ದರಿಂದ ಸರ್ಕಾರವು ಹಾಸ್ಟೆಲ್ ನಿರ್ವಹಣೆ ನೋಡಿಕೊಳ್ಳಲು ಪ್ರತ್ಯೇಕ ಸ್ವತಂತ್ರ ಸಂಸ್ಥೆ ರಚಿಸಬೇಕು ಎಂದು ಅವರು ಆಗ್ರಹಿಸಿದರು.
ಕೋಟ್ಯಂತರ ರು. ಬಾಡಿಗೆ: ಎಬಿವಿಪಿ ನಡೆಸಿದ ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಹಾಸ್ಟೆಲ್ ಸುಧಾರಣೆಗೆ ಕೈಗೊಳ್ಳಬೇಕಾದ ತುರ್ತು ಕ್ರಮಗಳನ್ನೂ ತಿಳಿಸಲಾಗಿದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರ ಭತ್ಯೆಯನ್ನು 1500ಕ್ಕೆ ಹೆಚ್ಚಿಸಬೇಕು. ಶೌಚಾಲಯ ಹಾಗೂ ಸ್ನಾನಗೃಹ ಹೆಚ್ಚಳಕ್ಕೆ ಕ್ರಮ, ರಾಜ್ಯದಲ್ಲಿ ಶೇ.55ರಷ್ಟು ಹಾಸ್ಟೆಲ್ಗಳಿಗೆ ಮಾತ್ರ ಸ್ವಂತ ಕಟ್ಟಗಳಿದ್ದು, ಕೋಟ್ಯಂತರ ರು. ಬಾಡಿಗೆ ಕಟ್ಟಿ ಪ್ರತಿ ವರ್ಷ ಖಾಸಗಿಯವರ ಉದ್ಧಾರ ಮಾಡಲಾಗುತ್ತಿದೆ. ಪ್ರತಿ ಹಾಸ್ಟೆಲ್ಗಳಲ್ಲಿ ಅಧ್ಯಯನ ಕೊಠಡಿ, ಗ್ರಂಥಾಲಯ, ಕಂಪ್ಯೂಟರ್ ಸೌಲಭ್ಯ ಕಲ್ಪಿಸಬೇಕು. ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ ಶೇ.50 ಮಕ್ಕಳಿಗಾದರೂ ಪ್ರವೇಶ ದೊರೆಯುವಂತೆ ಹೊಸ ಹಾಸ್ಟೆಲ್ ಪ್ರಾರಂಭಿಸಬೇಕು. ಬಾಲಕಿಯರ ಹಾಸ್ಟೆಲ್ಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ಪೌಷ್ಟಿತ ಆಹಾರ, ಶುದ್ಧ ಕುಡಿವ ನೀರು, ಎಲ್ಲ ಹಾಸ್ಟೆಲ್ಗಳಲ್ಲಿ ಬಯೋವುಟ್ರಿಕ್ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಹೋರಾಟದತ್ತ: ಸಂಘಟನೆ ಈ ಹಿಂದಿನಿಂದಲೂ ಹಾಸ್ಟೆಲ್ ಸುಧಾರಣೆಗೆ ಆಗ್ರಹಿಸಿ ಹೋರಾಟ ನಡೆಸುತ್ತ ಬಂದಿದೆ. ಆದ್ದರಿಂದ ಮಾಸಿಕ ಆಹಾರ ಭತ್ಯೆ ಸದ್ಯ 1 ಸಾವಿರ ನೀಡಲಾಗುತ್ತಿದೆ. 2006ರಿಂದ ಸಮೀಕ್ಷೆ ನಡೆಸಿದ್ದು, ಸರ್ಕಾರ ವರದಿ ಪರಿಶೀಲಿಸಿ ಹಾಸ್ಟೆಲ್ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಡಾ.ಅಲ್ಲಮಪ್ರಭು ಆಗ್ರಹಿಸಿದರು.
ಜಿಲ್ಲಾ ಸಂಚಾಲಕ ವೀರಭದ್ರ ಕಿರದಳ್ಳಿ, ಸಂಘಟನಾ ಕಾರ್ಯದರ್ಶಿ ಮಂಜುನಾಥ ಮೀಸೆ, ಶರಣಗೌಡ, ಚಂದ್ರಕಾಂತ ಕುಲಕರ್ಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

