ಗುಲ್ಬರ್ಗಾ

ಪ್ರಜ್ಞಾವಂತ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಪೂರಕ

Published On :

ಯಾದಗಿರಿ: ಪ್ರಜ್ಞಾವಂತ ಸಮಾಜದ ನಿರ್ಮಾಣಕ್ಕೆ ಶಿಕ್ಷಣ ಪೂರಕವಾಗಿದ್ದು, ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಶಿಕ್ಷಣದ ಮಹತ್ವ ಕುರಿತು ಜಾಗೃತಿ ಮೂಡಿಸುವ ಮಹತ್ಕಾರ್ಯ ಎಲ್ಲರಿಂದ ಆಗಬೇಕಿದೆ ಎಂದು ಜಿಡಿಎಸ್ ಜಿಲ್ಲಾಧ್ಯಕ್ಷ ನಾಗನಗೌಡ ಕಂದಕೂರ ಹೇಳಿದರು.
  ಇಲ್ಲಿನ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆಯ ಶಾಂತಿ ಸದನ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿ ಶಿಕ್ಷಣದ ಮಹತ್ವ ಹೆಚ್ಚಾಗುತ್ತಿದ್ದಂತೆ ಅದರ ವ್ಯಾಪ್ತಿ ಮತ್ತು ವಿಸ್ತಾರಗಳೂ ಬದಲಾಗುತ್ತಿವೆ. ಮಕ್ಕಳಿಗೆ ಎಳವೆಯಲ್ಲೇ ಪೂರ್ವ ಬಾಲ್ಯಾವಧಿ ಶಿಕ್ಷಣ ನೀಡುವತ್ತ ಪ್ರಮುಖವಾಗಿ ಗಮನ ಹರಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಯಾದಗಿರಿಯಲ್ಲಿ ಶಾಂತಿ ಸದನ ಪೂರ್ವ ಪ್ರಾಥಮಿಕ ಶಾಲಾ ಕೆಲಸವನ್ನು ಶ್ಲಾಘಿಸಿದರು.
  ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸಾಹೇಬಗೌಡ ಬಿರಾದರ ಮಾತನಾಡಿ, ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆಯಿದೆ. ಇದನ್ನು ಮಕ್ಕಳಿಗೆ ದೊರಕಿಸಿಕೊಡುವ ಹೊಣೆ ಶಿಕ್ಷಕರ ಮೇಲಿದೆ. ಇದಕ್ಕೆ ಪಾಲಕರ ಪ್ರೋತ್ಸಾಹವೂ ಅಗತ್ಯ ಎಂದರು.
  ಪತ್ರಕರ್ತ ಎಸ್.ಎಸ್.ಮಠ ಮಾತನಾಡಿ, ಮಕ್ಕಳಗೆ ಶಿಕ್ಷಣದ ಜತೆಗೆ ರಾಷ್ಟ್ರಪ್ರೇಮ, ಭಾಷಾಭಿಮಾನ ಮೂಡಿಸುವುದರೊಂದಿಗೆ ನಮ್ಮ ಸಂಸ್ಕೃತಿಯನ್ನೂ ಕಲಿಸಿಕೊಡಬೇಕು. ಮಕ್ಕಳ ಮೇಲೆ ಒತ್ತಡ ಹೇರದೇ ಅವರ ಆಸಕ್ತಿಯನ್ನು ಗಮನಿಸಿ ಪ್ರೋತ್ಸಾಹಿಸಿದರೆ ಅವರಿಂದ ಸಾಧನೆ ನಿರೀಕ್ಷಿಸಬಹುದು ಎಂದರು.
   ಇದೇ ಸಂದರ್ಭದಲ್ಲಿ ಪುಟಾಣಿ ವಿಜ್ಞಾನ ಬಳಗ ಚಿತ್ರದುರ್ಗ ಇವರು ನಡೆಸಿದ ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ ಪತ್ರ, ಪದಕ ನೀಡಿ ಪ್ರೋತ್ಸಾಹಿಸಲಾಯಿತು. ಶಾಲೆಯ ಮುಖ್ಯಸ್ಥ ಬಸವಂತರೆಡ್ಡಿ ವೀರಡ್ಡಿ ಇತರರು ಇದ್ದರು.
  ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಾಹೇಬರೆಡ್ಡಿ ಬಕ್ಕಾ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಸವಿತಾ ಎಸ್.ರೆಡ್ಡಿ ಪ್ರಾಸ್ತಾವಿಕ ಮಾತನಾಡಿ, ನಿರೂಪಿಸಿದರು. ಸುನಿತಾ ಸ್ವಾಗತಿಸಿದರು. ನಂತರ ಮಕ್ಕಳಿಂದ ಜರುಗಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜಿಸಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.