ಕೆಬಿಜೆಎನ್ನೆಲ್ ಕಚೇರಿಗೆ ಮುತ್ತಿಗೆ: ಕರವೇ ಎಚ್ಚರಿಕೆ
ಸುರಪುರ: ನಾರಾಯಣಪುರ ಎಡದಂಡೆ ಕಾಲುವೆಗೆ ಮಾರ್ಚ್ 30ರವರೆಗೆ ನೀರು ಹರಿಸದಿದ್ದರೆ ಮಾ.1ರಂದು ಸುರಪುರ-ಶಹಪುರ ತಾಲೂಕಿನ ನೂರಾರು ರೈತರೊಂದಿಗೆ ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕ ಬಸವರಾಜ ಪಡುಕೋಟೆ ಎಚ್ಚರಿಸಿದ್ದಾರೆ.
ಬೆಂಗಳೂರಿನ ಕೆಬಿಜೆಎನ್ನೆಲ್ ಪ್ರಧಾನ ಕಚೇರಿಯಲ್ಲಿ ಬುಧವಾರ ಕೆಬಿಜೆಎನ್ನೆಲ್ ವ್ಯವಸ್ಥಾಪಕ ನಿರ್ದೇಶಕ ಕಪಿಲ್ ಮೋಹನರನ್ನು ಭೇಟಿಯಾಗಿ ಮಾ.30ರವರೆಗೆ ನೀರು ಹರಿಸುವಂತೆ ಮನವಿ ಮಾಡಿಕೊಂಡರು.
ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರು ಲಕ್ಷಾಂತರ ರುಪಾಯಿ ವೆಚ್ಚ ಮಾಡಿ ಹತ್ತಿ, ಶೇಂಗಾ, ಮೆಣಸಿನಕಾಯಿ ಇನ್ನಿತರ ಅಲ್ಪಾವಧಿ ಬೆಳೆಗಳನ್ನು ಹಾಕಿದ್ದಾರೆ. ಈಗ ಕಾಲುವೆಗೆ ನೀರು ಬಂದ್ ಮಾಡಿದ್ದರಿಂದ ಬೆಳೆಗಳು ಬಾಡುವ ಹಂತದಲ್ಲಿವೆ. ಇದರಿಂದ ರೈತರ ಕೋಟ್ಯಂತರ ಮೊತ್ತದ ಬೆಳ ನಷ್ಟವಾಗಿ ಅವರು ಬೀದಿಗೆ ಬೀಳುತ್ತಾರೆ. ಮತ್ತೆ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ನೀರು ಹರಿಸದಿದ್ದರೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಕರವೇ ಮುಖಂಡರು ಎಚ್ಚರಿಕೆ ನೀಡಿದರು. ಕರವೇ ಬೆಂಗಳೂರು ವಿದ್ಯಾರ್ಥಿ ಘಟಕದ ಅಧ್ಯಕ್ಷ ಜಗದೀಶ ಮತ್ತು ಧನಂಜಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

