ಸುಸೂತ್ರ ಮತದಾನಕ್ಕೆ ಶ್ರಮಿಸಿ: ಜಿಲ್ಲಾಧಿಕಾರಿ ಜಮಾದಾರ
ಯಾದಗಿರಿ: ನ್ಯಾಯ ಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ಚುನಾವಣೆ ನಡೆಯಲು ಸಿಬ್ಬಂದಿ ಶ್ರಮಿಸಬೇಕು. ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯಲು ಎಲ್ಲ ಸಿಬ್ಬಂದಿ ತರಬೇತಿ ಪಡೆದು ಸಿದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಜಮಾದಾರ ಹೇಳಿದರು.
ನಗರದ ಸರ್ಕಾರಿ ಪಪೂ ಕಾಲೇಜಿನಲ್ಲಿ ಚುನಾವಣೆ ಸಿಬ್ಬಂದಿಗೆ ನಡೆಯುತ್ತಿರುವ ತರಬೇತಿ ಕಾರ್ಯಾಗಾರಕ್ಕೆ ಗುರುವಾರ ಭೇಟಿ ನೀಡಿ ಸೂಕ್ತ ಮಾಹಿತಿ ನೀಡಿದರು. ನಗರ ಸ್ಥಳೀಯ ಸಂಸ್ಥೆ ಚುನಾವಣೆ ಮುಂದಿನ ಸಾರ್ವತ್ರಿಕ ಚುನಾವಣೆಗೆ ತರಬೇತಿ ಇದ್ದಂತೆ. ಆದ್ದರಿಂದ ಸಿಬ್ಬಂದಿ ಸೂಕ್ತ ಮಾಹಿತಿ ಪಡೆದುಕೊಂಡು ಸಿದ್ಧರಾಗಬೇಕಿದೆ. ಯಾವುದೇ ರೀತಿಯ ಲೋಪದೋಷ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮಸ್ಯೆ ಎದುರಾದರೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದುಕೊಳ್ಳಬೇಕು. ಮತಯಂತ್ರ ಕಾರ್ಯನಿರ್ವಹಿಸುವ ಬಗೆಯನ್ನು ತಿಳಿದುಕೊಳ್ಳಬೇಕು. ಮತಯಂತ್ರದಲ್ಲಿ ಸಮಸ್ಯೆ ಇದ್ದಲ್ಲಿ ತರಬೇತಿ ಸಮಯದಲ್ಲಿ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಚುನಾವಣಾ ವೀಕ್ಷಕ ಟಿ.ಎಚ್.ಎಂ. ಕುಮಾರ, ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು, ಸಹಾಯ ಆಯುಕ್ತ ಪರಶುರಾಮ, ಚುಣಾವಣೆ ತಹಸೀಲ್ದಾರ್ ಗುರು ಪಾಟೀಲ, ಶಿರಸ್ತೇದಾರ ಮಲ್ಲಿಕಾರ್ಜುನ, ಚನ್ನಮಲ್ಲಿಕಾರ್ಜುನ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

