ಗುಲ್ಬರ್ಗಾ

'ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ'

Published On :

ಚಿತ್ತಾಪುರ: ಚಿತ್ತಾಪುರ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ತಮ್ಮ ಗುರಿಯಾಗಿದ್ದು, ತಮ್ಮ ಅವಧಿಯಲ್ಲಿ 450 ಕೋಟಿ ಅನುದಾನದಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಇನ್ನು ಹೆಚ್ಚಿನ ಅನುದಾನ ತಂದು  ಸಂಪೂರ್ಣ ಕ್ಷೇತ್ರ ಅಭಿವೃದ್ಧಿ ಮಾಡಲಾಗುವುದು ಇದಕ್ಕೆ ಎಲ್ಲರ ಸಹಾಯ ಸಹಕಾರ ಅಗತ್ಯ ಎಂದು ಶಾಸಕ ವಾಲ್ಮೀಕಿ ನಾಯಕ ಹೇಳಿದರು.
ತಾಲೂಕಿನ ಇಟಗಾ ಗ್ರಾಮದಲ್ಲಿ ನಬಾರ್ಡ್ ವತಿಯಿಂದ 25 ಲಕ್ಷ ವೆಚ್ಚದಲ್ಲಿ ಸೇತುವೆ ಹಾಗೂ 25 ಲಕ್ಷದ 3 ಕಿ.ಮೀ. ಇಟಗಾದಿಂದ ಮಳಖೇಡಕ್ಕೆ ಹೋಗುವ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಮಾತನಾಡಿದರು.
ಜಿಪಂ ಎಇಇ ನಂದಕುಮಾರ ಕುಲಕರ್ಣಿ ಮಾತನಾಡಿ, ತಮ್ಮ ಇಲಾಖೆ ಸರ್ಕಾರದಿಂದ ಬರುವ ಅಭಿವೃದ್ಧಿ ಕಾಮಗಾರಿಗಳನ್ನು ಒಳ್ಳೆಯ ಗುಣಮಟ್ಟದಲ್ಲಿ ಕಾಮಗಾರಿ ಮಾಡುತ್ತಿರುವುದಾಗಿ ಹೇಳಿದರು.
ಆಶ್ರಯ ಸಮಿತಿ ಸದಸ್ಯ ಬಸವರಾಜ ಚಿನಮಳ್ಳಿ, ಮಲ್ಲಿಕಾರ್ಜುನ ಎಮ್ಮೆನೋರ, ತಮ್ಮಣ್ಣ ಡಿಗ್ಗಿ ಮಾತನಾಡಿದರು. ತಾಪಂ ಇಓ ಸುರೇಶ ಬಿರಾದಾರ, ಪುರಸಭೆ ಸದಸ್ಯ ನಾಗರಾಜ ಹೂಗಾರ, ಗುತ್ತಿಗೆದಾರ ಗುರುನಾಥ ಚವ್ವಾಣ, ಗ್ರಾಮದ ಮುಖಂಡ ವಿಠ್ಠಲ್ ಡಿಗ್ಗಿ, ತಿಪ್ಪಣ್ಣ ದಳಪತಿ, ವಿಷ್ಣು ಜಿತುರೆ, ಚಂದ್ರು ಕಾಳಗಿ, ಸಾಬಣ್ಣ ಮಳಖೇಡ, ನಾಗೂ ಬೋಮ್ಮನಳ್ಳಿ, ಮಹೇಶ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.