ಮಹಿಳಾ ಜಾಗೃತಿ ಅಭಿಯಾನ
ಗುಲ್ಬರ್ಗ: ಬಾಲಕಿ ಮತ್ತು ಯುವತಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ 'ಸ್ತ್ರೀ ಗೌರವ ರಕ್ಷಕರು ಯಾರು' ಎಂಬ ಘೋಷಣೆಯೊಂದಿಗೆ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ವತಿಯಿಂದ ಸೋಮವಾರ ನಗರದಲ್ಲಿ ಮಹಿಳಾ ಜಾಗೃತಿ ಅಭಿಯಾನ ನಡೆಸಲಾಯಿತು.
ಬಲತ್ಕಾರಗಳಂತಹ ಘೋರ ಕೃತ್ಯಗಳನ್ನೆಸಗಿದವರಿಗೆ ಕಠಿಣ ಶಿಕ್ಷೆಯನ್ನು ಸಾರ್ವಜನಿಕವಾಗಿ ಜಾರಿಗೊಳಿಸುವ ವ್ಯವಸ್ಥೆ ಮಾಡಬೇಕು, ಕಾನೂನು ಬದ್ಧ ವೈವಾಹಿಕ ಸಂಬಂಧದಡಿಯಲ್ಲೇ ಲೈಂಗಿಕ ಬೇಡಿಕೆಗಳನ್ನು ಮಾನ್ಯ ಮಾಡಬೇಕು. ಇದರ ಹೊರತಾದ 'ಲೈವ್ ಇನ್ ರಿಲೇಷನ್ಶಿಪ್' ಸಮೇತ ಯಾವುದೇ ಸಂಬಂಧಗಳು ಕಾನೂನುಬಾಹಿರವೆಂದು ಹಾಗೂ ತಪ್ಪಿತಸ್ಥರು ಶಿಕ್ಷೆಗೊಳಗಾಗುವರು ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಪೊಲೀಸ್ ವ್ಯವಸ್ಥೆಯಲ್ಲಿ ವಿಶೇಷವಾಗಿ ಎಫ್ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿ ಸುಧಾರಣೆಗಳನ್ನು ಶೀಘ್ರದಲ್ಲೇ ಜಾರಿಗೆ ತರಬೇಕು, ವಿಳಂಬವಾಗಿ ಎಫ್ಐಆರ್ ದಾಖಲಿಸುವುದು ಶಿಕ್ಷಾರ್ಹ ಅಪರಾಧವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು. ಸಂಘಟನೆಗಳ ಹಲವಾರು ಮುಖಂಡರು, ಮಹಿಳೆಯರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

