ಗುಲ್ಬರ್ಗಾ

ಇಂದು ಡಿಸಿ ಕಚೇರಿ ಎದುರು ಧರಣಿ

Published On :

ಗುಲ್ಬರ್ಗ: ಬಡವರ, ದಲಿತರ ಸಬಲೀಕರಣಕ್ಕಾಗಿ ಸಂವಿಧಾನ ಆಶಯ ಅನುಷ್ಠಾನಗೊಳಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಘಟಕ ಜ.24ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಿದೆ. ಸುಳ್ಳು ಜಾತಿ ಪತ್ರ ಪಡೆದವರ ವಿರುದ್ಧ ರಚನೆಯಾಗಿರುವ ಕಾನೂನು ಜಾರಿಗೊಳಿಸಬೇಕು, ಏಪ್ರಿಲ್ 14ರಂದು ಡಾ. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಿದ ನಂತರ ಬೇಸಿಗೆ ರಜೆ ಘೋಷಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಜಿಲ್ಲಾ ಸಂಚಾಲಕ ಸಂಜೀವಕುಮಾರ ಜವಳಕರ್ ತಿಳಿಸಿದ್ದಾರೆ. ಬೆಂಗಳೂರು ವಿಧಾನಸೌಧದ ಮುಂದಿರುವ ಡಾ. ಅಂಬೇಡ್ಕರ್ ಅವರ ಪ್ರತಿಮೆಯನ್ನು ಯಾವುದೇ ತಾಂತ್ರಿಕ ಕಾರಣ ನೀಡಿ ಸ್ಥಳಾಂತರಗೊಳಿಸಬಾರದು, 2013-14ರ ರಾಜ್ಯ ಬಜೆಟ್‌ನಲ್ಲಿ ಯೋಜನಾ ಆಯೋಗದ ನಿರ್ದೇಶನದಂತೆ ದಲಿತ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಹಣ ನಿಗದಿಗೊಳಿಸಬೇಕು, ಹೊರಗುತ್ತಿಗೆ ನೀಡುವುದನ್ನು ರದ್ದುಗೊಳಿಸಬೇಕು, ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಮಿತಿ ಮುಖಂಡರು, ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಇಂದು ಚಿತ್ರಕಲಾ ಪ್ರದರ್ಶನ
ಗುಲ್ಬರ್ಗ: ನಗರದ ಚೈತನ್ಯಮಯಿ ಆರ್ಟ್ ಗ್ಯಾಲರಿಯ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ದಿ ಆರ್ಟ್ ಇಂಟಿಗ್ರೇಶನ್ ಚಿತ್ರಕಲಾ ಕಾಲೇಜು ಸಹಯೋಗದೊಂದಿಗೆ ಜ.24ರಂದು ಬೆ.10 ಗಂಟೆಗೆ ನಗರದ ಅಂಕುರ ಆರ್ಟ್ ಗ್ಯಾಲರಿಯಲ್ಲಿ ಹೈ.ಕ. ಪ್ರದೇಶದ ಮಹಿಳಾ ಕಲಾವಿದರ ಚಿತ್ರಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯದ ವಾಸ್ತುಶಿಲ್ಪ ವಿಭಾಗದ ಮುಖ್ಯಸ್ಥ ಪರಂಜ್ಯೋತಿ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಸೂತಿ ಕೌಶಲ್ಯ ಕಲಾವಿದೆ ಶಾಂತಾ ಪ್ರಭಾಕರ ಕಮಲಾಪುರಕರ್ ಆಗಮಿಸಲಿದ್ದಾರೆ. ದಿ ಆರ್ಟ್ ಇಂಟಿಗ್ರೇಶನ್ ಸೊಸೈಟಿ ನಿರ್ದೇಶಕಿ ನೀಲಮ್ಮ ಎಂ. ಬೆಳಮಗಿ ಅಧ್ಯಕ್ಷತೆ ವಹಿಸಲಿದ್ದಾರೆ.
ಇಂದು ಸದಸ್ಯತ್ವ ಅಭಿಯಾನ
ಗುಲ್ಬರ್ಗ: ಕೆಜೆಪಿ ಪಕ್ಷದ ಜಿಲ್ಲಾ ಘಟಕವು ಜ.24ರಂದು ನಗರದ ಹಜರತ್ ಖಾಜಾ ಬಂದೇ ನವಾಜ್ ದರ್ಗಾ ಹತ್ತಿರ ಮಧ್ಯಾಹ್ನ 12.30ಕ್ಕೆ ಗುಲ್ಬರ್ಗ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದೆ. ರಾಜ್ಯ ಮಾಧ್ಯಮ ಪ್ರಮುಖ ಬಿ.ಆರ್. ಪಾಟೀಲ್, ರಾಜ್ಯ ಕಾರ್ಯದರ್ಶಿ ತಿಪ್ಪಣಪ್ಪ ಕಮಕನೂರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸತೀಶ ಗುತ್ತೇದಾರ, ವಿಭಾಗೀಯ ಕಾರ್ಯದರ್ಶಿಗಳಾದ ಸುಭಾಷ ಬಿರಾದಾರ, ಸಂಗಣ್ಣ ಇಜೇರಿ, ಗುಲ್ಬರ್ಗ ಗ್ರಾಮಾಂತರ ಜಿಲ್ಲಾ ಸಂಚಾಲಕ ಬಸವರಾಜ ಇಂಗಿನ್, ಸಹ ಸಂಚಾಲಕ ಸೂರ್ಯಕಾಂತ ನಿಂಬಾಳಕರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಹೆಚ್ಚು ಸದಸ್ಯರ ನೋಂದಣಿಗೆ ಸಹಕರಿಸಬೇಕೆಂದು ಮಹಾನಗರ ಸಂಚಾಲಕ ಅಮರನಾಥ ತಡಕಲ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.