ಗುಲ್ಬರ್ಗಾ

ಇಂದು ನೂತನ ಸಂಜೆ ಕನ್ನಡ ದಿನಪತ್ರಿಕೆ ಬಿಡುಗಡೆ

Published On :

ಗುಲ್ಬರ್ಗ: ಹೈದ್ರಾಬಾದ್ ಕರ್ನಾಟಕ ಮೀಡಿಯಾ ಎಕ್ಸ್‌ಲೆನ್ಸ್ ಅಕಾಡೆಮಿ ವತಿಯಿಂದ ಜ.26ರಂದು ಸಂಜೆ 6ಕ್ಕೆ ನಗರದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಚಿತ್ರ ಸುದ್ದಿ ನೂತನ ಸಂಜೆ ಕನ್ನಡ ದಿನಪತ್ರಿಕೆ ಬಿಡುಗಡೆ ಸಮಾರಂಭ ನಡೆಯಲಿದೆ.
ಸುಲಫಲ ಮಠದ ಮಹಾಂತ ಶಿವಾಚಾರ್ಯ ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪತ್ರಿಕೆ ಬಿಡುಗಡೆ ಮಾಡಲಿದ್ದಾರೆ. ಗುಲ್ಬರ್ಗ ಉಸ್ತುವಾರಿ ಸಚಿವ ರೇವುನಾಯಕ ಬೆಳಮಗಿ, ಶಾಸಕರಾದ ಖಮರುಲ್ ಇಸ್ಲಾಂ, ಅರುಣಾ ಪಾಟೀಲ್ ರೇವೂರ, ಡಾ. ಶರಣಪ್ರಕಾಶ ಪಾಟೀಲ್, ಶಶೀಲ್ ನಮೋಶಿ, ಮಹಾನಗರ ಪಾಲಿಕೆ ಮೇಯರ ಸೋಮಶೇಖರ ಮೇಲಿನಮನಿ, ಗುಲ್ಬರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿದ್ಯಾಸಾಗರ ಕುಲಕರ್ಣಿ, ಪತ್ರಕರ್ತರಾದ ಬಾಬುರಾವ ಯಡ್ರಾಮಿ, ಮೋಹಿಯೋದ್ದೀನ್ ಪಾಷಾ ಆಗಮಿಸಲಿದ್ದಾರೆ.
ಹಿರಿಯ ಪತ್ರಕರ್ತ ಟಿ.ವಿ. ಶಿವಾನಂದನ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಶ್ರೀಕಾಂತಾಚಾರ್ಯ ಮಣ್ಣೂರ, ಎಸ್.ಬಿ. ಜೋಶಿ, ದೇವು ಪತ್ತಾರ ಅವರಿಗೆ ವಾರ್ಷಿಕ- 2012ರ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು, ಸಾರ್ವಜನಿಕರು ಭಾಗವಹಿಸಬೇಕು ಎಂದು ಪತ್ರಿಕೆ ಸಂಪಾದಕ ಡಾ. ಕಿಶೋರಸಿಂಗ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.