ಗುಲ್ಬರ್ಗಾ

'ಕಾಲುವೆ ಆಧುನೀಕರಣ; 30 ಕೋಟಿ ರುಪಾಯಿಬಿಡುಗಡೆಗೆ ಪ್ರಸ್ತಾವನೆ'

Published On :

ಚಿಂಚೋಳಿ: ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಯೋಜನೆಯ 1ರಿಂದ 80 ಕಿ.ಮೀ. ಮುಖ್ಯ ಕಾಲುವೆ ಆಧುನೀಕರಣಗೊಳಿಸುವುದಕ್ಕಾಗಿ 30 ಕೋಟಿ ಬಿಡುಗಡೆಗೊಳಿಸಲು ನೀರಾವರಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಹಣ ಬಿಡುಗಡೆಗೊಳಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆಂದು ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು. ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ಗುರುವಾರ ಹೊಸದಾಗಿ ಆಧುನಿಕರಣಗೊಳಿಸಿದ ಬಸ್ ನಿಲ್ದಾಣ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕಸ್ತೂರಿಬಾ ಗಾಂಧಿ ಬಾಲಿಕಾ ಉರ್ದು ವಸತಿ ನಿಲಯ ಉದ್ಘಾಟಿಸಿ ಬಸ್ ನಿಲ್ದಾಣದಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಮಾತನಾಡಿದರು. ಚಿಂಚೋಳಿ-ಸೇಡಂ ತಾಲೂಕುಗಳ ಮಧ್ಯೆ ಉತ್ತಮ ರಸ್ತೆ ಸಂಪರ್ಕಕ್ಕೆ ರಸ್ತೆ ಅಗಲೀಕರಣಕ್ಕಾಗಿ 30 ಕೋಟಿ ನೀಡಲಾಗಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿ ಗುತ್ತಿಗೆದಾರರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮಂದಗತಿಯಲ್ಲಿ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಸಂಜೀವನ್ ಯಾಕಾಪುರ, ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಕುಮಾರ, ಈಶಾನ್ಯ ಸಾರಿಗೆ ಗುಲ್ಬರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಶ, ಸುಭಾಶ್ಚಂದ್ರ ನಿಷ್ಟಿ ಮಾತನಾಡಿದರು. ತಾಪಂ ಉಪಾಧ್ಯಕ್ಷ ತಾರಾಮತಿ ಕುಂಬಾರ, ಗ್ರಾಪಂ ಅಧ್ಯಕ್ಷೆ ಕವಿತಾ ಬೆಳ್ಳಿಚುಕ್ಕಿ, ಉಪಾಧ್ಯಕ್ಷ ವಿಜಯಲಕ್ಷ್ಮಿ ಅಪ್ಪಾರಾವ ಚೌದ್ರಿ, ತಾಪಂ ಸದಸ್ಯರಾದ ಮಹೇಶಪ್ಪ ನಿಡಗುಂದಾ, ಬಸಯ್ಯಸ್ವಾಮಿ ಕೆರೋಳಿ, ರುದ್ರಶೆಟ್ಟಿ ಪಡಶೆಟ್ಟಿ, ಅಂಬರೀಶ ಗೋಣಿ, ಚಂದ್ರಕಾಂತ ರಂಗನೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.