ಅಧಿಕಾರಿಗಳ ವಿರುದ್ಧ ಸಮನ್ಸ್
ಚಿಂಚೋಳಿ: ತಾಲೂಕಿನ ಐನೋಳ್ಳಿ ಗ್ರಾಮಕ್ಕೆ ಬಸ್ ಸಂಪರ್ಕ ಒದಗಿಸಬೇಕೆಂದು ಜಿಲ್ಲಾ ಸಾರಿಗೆ ನಿಯಂತ್ರಣಾಧಿಕಾರಿ ಆದೇಶಿಸಿದರೂ ಚಿಂಚೋಳಿ ಬಸ್ ಡಿಪೋ ಘಟಕದ ವ್ಯವಸ್ಥಾಪಕ ಮಹ್ಮದ್ ನಯ್ಯೂಮ್, ಬಸ್ ನಿಯಂತ್ರಣಕ ನೀಲಕಂಠ ಮತ್ತು ಉಮಾಜಿ ಮತ್ತು ಸಾಯಬಣ್ಣ ಅವರ ವಿರುದ್ಧ ಚಿಂಚೋಳಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.ಐನೋಳಿ ಗ್ರಾಮಸ್ಥರಿಗೆ, ವಿದ್ಯಾರ್ಥಿಗಳಿಗೆ ಬಸ್ಸಿನ ಸಂಪರ್ಕ ವ್ಯವಸ್ಥೆಯನ್ನು ಒದಗಿಸಬೇಕೆಂದು ಗ್ರಾಮಸ್ಥರು ಸಾರಿಗೆ ಇಲಾಖೆಗೆ ಮನವಿ ಮಾಡಿದ್ದರು. ಅವರ ಮನವಿ ಮೇರೆಗೆ ಜಿಲ್ಲಾ ಸಾರಿಗೆ ನಿಯಂತ್ರಣ ಅಧಿಕಾರಿಗಳು ಐನೋಳ್ಳಿ ಗ್ರಾಮಕ್ಕೆ ಬಸ್ಸಿನ ಸೌಲಭ್ಯ ಒದಗಿಸುವಂತೆ ಇಲ್ಲಿನ ಬಸ್ ಘಟಕ ವ್ಯವಸ್ಥಾಪಕರಿಗೆ ಆದೇಶ ನೀಡಿದರು. ಆದರೆ ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಮಾಡಿ ಐನೋಳಿ ಗ್ರಾಮಕ್ಕೆ ಬಸ್ ಸೌಲಭ್ಯ ನೀಡದ ಕಾರಣ ಭೀಮರಾವ ಬಕ್ಕಪ್ಪ ಬಡಿಗೇರ ಇಲ್ಲಿನ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದರು. ಚಿಂಚೋಳಿ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ಮಾಡಿ ಮೇಲಿನ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ನ್ಯಾಯವಾದಿ ಶ್ರೀಮಂತ ಕಟ್ಟಿಮನಿ ತಿಳಿಸಿದ್ದಾರೆ.
ಪ್ರತಿಭಾ ಪುರಸ್ಕಾರ ಸಮಾರಂಭ
ಗುಲ್ಬರ್ಗ: ಜಿಲ್ಲಾ ಭೋವಿ (ವಡ್ಡರ) ಸಮಾಜದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಗರದ ಕೆಇಬಿ ಎಂಜಿನಿಯರಿಂಗ್ ಸಭಾಗೃಹದಲ್ಲಿ ಹಮ್ಮಿಕೊಂಡಿದೆ. ಫೆ. 3ರಂದು ಜೇವರ್ಗಿ ಪ್ರವಾಸಿ ಮಂದಿರದಲ್ಲಿ ಸಭೆ ಕರೆಯಲಾಗಿದೆ ಎಂದು ಭೀಮಾಶಂಕರ ಯಲಗೋಡ ತಿಳಿಸಿದ್ದಾರೆ. ಮಾಹಿತಿಗೆ ಶಿವಕುಮಾರ ಗುತ್ತೇದಾರ 9845345479ಕ್ಕೆ ಸಂಪರ್ಕಿಸಿ.
ನಿಸರ್ಗ ಉತ್ಸವ
ಗುಲ್ಬರ್ಗ: ಜಿಲ್ಲಾ ಮಟ್ಟದ ನಿಸರ್ಗ ಉತ್ಸವ ಜ.30ರಂದು ಬೆ.10.30ಕ್ಕೆ ನಗರದ ನಿಸರ್ಗ ಪದವಿ ಕಾಲೇಜಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಉತ್ಸವವನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಈ.ಟಿ. ಪುಟ್ಟಯ್ಯ ಉದ್ಘಾಟಿಸಲಿದ್ದಾರೆ. ಸಿಂಡಿಕೇಟ್ ಸದಸ್ಯ ಸುಭಾಷ ರಾಠೋಡ ಅಧ್ಯಕ್ಷತೆ ವಹಿಸಲಿದ್ದಾರೆ. ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಂ. ಸಾಲುಂಕೆ, ಗುಲ್ಬರ್ಗ ಡಿಸಿಸಿ ಬ್ಯಾಂಕ್ನ ಸೋಮಶೇಖರ ಗೋನಾಯಕ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆಂದು ಪ್ರಾಚಾರ್ಯ ಪಾಟೀಲ್ ತಿಳಿಸಿದ್ದಾರೆ.
ಇಂದು ಬಹಿರಂಗ ಸಭೆ
ಗುಲ್ಬರ್ಗ: ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಗಾರರ ಸಂಘದ ವತಿಯಿಂದ ಜ.30ರಂದು ನಗರದ ಸೂಪರ್ ಮಾರ್ಕೇಟಿನಲ್ಲಿ ಬಹಿರಂಗ ಸಭೆ ನಡೆಯಲಿದೆ.ಕೂಲಿಗಾರರ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ, ರಾಜ್ಯ ಉಪಾಧ್ಯಕ್ಷ ಜಿ.ಎನ್. ನಾಗರಾಜ್ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ. ಜ.30 ಮತ್ತು 31ರಂದು ಎರಡು ದಿನಗಳ ಕಾಲ ನಗರದ ಕನ್ನಡ ಭವನದಲ್ಲಿ ಕೂಲಿಕಾರರ ಸಂಘದ 2ನೇ ಜಿಲ್ಲಾ ಸಮ್ಮೇಳನ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

