ಗುಲ್ಬರ್ಗ: ನಗರದ ದೊಡ್ಡಪ್ಪ ಅಪ್ಪ ವಸತಿ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಗುಲ್ಬರ್ಗದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಎ.ಎಚ್. ಎಲಿಮನಿ ಮಾತನಾಡಿದರು. ಹಿರಿಯ ಪತ್ರಕರ್ತ ಡಿ. ಶಿವಲಿಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶೃತಿ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಗೌರಿಶಂಕರ ಸ್ವಾಗತಿಸಿದರು. ಪಲ್ಲವಿ, ಎಂ.ಡಿ. ಆಸೀಫ್ ಅಲಿ, ಪ್ರಿಯಾ ಅವರು ಕಾಲೇಜಿನ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು. ಸುಚಿತ್ರಾ ಮತ್ತು ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು. ರಾಜಶ್ರೀ ಬಿ ವಂದಿಸಿದರು. ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಇದ್ದರು.
---