ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಸ್ತೆ ತಡೆ
ಚಿಂಚೋಳಿ: ತಾಲೂಕಿನ ಕೊಳ್ಳುರ ಗ್ರಾಮಸ್ಥರು ತಮ್ಮ ಗ್ರಾಮದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಬುಧವಾರ ಚಿಂಚೋಳಿ- ಬೀದರ್ ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ಕೊಳ್ಳುರ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿ ತುಂಬಾ ನಿಧಾನಗತಿಯಿಂದ ನಡೆಯುತ್ತಿದೆ, ರಸ್ತೆ ಕಾಮಗಾರಿ ಕಳಪೆಮಟ್ಟದಿಂದ ನಡೆಯುತ್ತಿದ್ದು, ರಸ್ತೆ ಅಪಘಾತಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು. ರಸ್ತೆಯಲ್ಲಿ ವಾಹನಗಳ ಸಂಚಾರದಿಂದ ಧೂಳಿನಿಂದ ಗ್ರಾಮಸ್ಥರು ತೊಂದರೆ ಪಡುವಂತಾಗಿದೆ ಎಂದು ತಮ್ಮಾರೆಡ್ಡಿ ಸೇರಿಕಾರ್ ಅಧಿಕಾರಿಗಳ ಗಮನಕ್ಕೆ ತಂದರು.
ಕೊಳ್ಳುರ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ತಾಂತ್ರಿಕವಾಗಿಲ್ಲ, ಮುಂದೆ ಅನಾಹುತಗಳ ಸಂಭವಿಸುವ ಸಾಧ್ಯತೆಗಳಿವೆ. ಬೀದರ್- ಚಿಂಚೋಳಿ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿಯಲ್ಲಿ ಚರಂಡಿ ನಿರ್ಮಿಸಬೇಕು ಮತ್ತು ಇನ್ನೀತರ ಬೇಡಿಕೆಗಳ ಮನವಿ ಪತ್ರವನ್ನು ಕೊಳ್ಳುರ ಗ್ರಾಮಸ್ಥರು ತ ಹಸೀಲ್ದಾರ್ಗೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

