ಗುಲ್ಬರ್ಗಾ

ಅಂಬೇಡ್ಕರರ ಆದರ್ಶ ಪಾಲಿಸಿ: ಭೀಮಣ್ಣ

Published On :

ಕೆಂಭಾವಿ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು. ಮಹಾನ್ ಮಾನವತಾವಾದಿಯ ಆದರ್ಶವನ್ನು ಎಲ್ಲರೂ ಅಳವಡಿಸಿಕೊಂಡರೆ ಸಮಾಜದ ಸುಧಾರಣೆ ಸಾಧ್ಯ ಎಂದು ಉಪನ್ಯಾಸಕ ಭೀಮಣ್ಣ ಅಂಚೆಸೂಗೂರ ಹೇಳಿದರು. ಸಮೀಪದ ಹೂವಿಹಳ್ಳಿಯಲ್ಲಿ ಅಂಬೇಡ್ಕರ್ ನಾಮಫಲಕ ಉದ್ಘಾಟನೆ ಹಾಗೂ ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬುದ್ಧ, ಬಸವ, ಅಂಬೇಡ್ಕರ್ ಅವರಂಥ ಮೇಧಾವಿಗಳು ಎಲ್ಲ ಜಾತಿ ಜನಾಂಗವನ್ನು ಒಂದೇ ದೃಷ್ಟಿಕೋನದಿಂದ ನೋಡಿ ಅವರ ಏಳ್ಗೆಗಾಗಿ ದುಡಿದವರು. ಅಂಥ ಮಹಾನ್ ಪುರುಷರ ಜಯಂತ್ಯುತ್ಸವವನ್ನು ಆಚರಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಮುಖಂಡ ಈಶ್ವರ ಬಡಿಗೇರ ವಹಿಸಿದ್ದರು. ವಿರುಪಾಕ್ಷಿ ಕರಡಕಲ್ ಧ್ವಜಾರೋಹಣ ನೆರವೇರಿಸಿದರು. ಹಣಮಂತ ಬೋಧನಕರ್, ಶರಣಪ್ಪ ಗುಳಬಾಳ, ಬಸವರಾಜಪ್ಪಗೌಡ ಹೊಸಮನಿ, ಶಿವಣ್ಣ ಸದಬ, ಅಯ್ಯನಗೌಡ, ಕಲ್ಲಣ್ಣ ಸಾಹುಕಾರ, ಸಂಗರಾಜ ವಾಲಿಕಾರ, ಶೇಖರಗೌಡ ಪೊಲೀಸ್‌ಪಾಟೀಲ, ಸಂಗನಗೌಡ ಗುರುಸುಣಗಿ, ರಾಮಣ್ಣ ಕಲ್ಲದೇವನಹಳ್ಳಿ ಇದ್ದರು. ಬೆಂಗಳೂರಿನ ನ್ಯಾಶನಲ್ ಗ್ಲೋಬಲ್ ಸರ್ವೀಸಸ್‌ನ ಯೋಜನಾ ನಿರ್ದೇಶಕ ಶರಣಬಸಪ್ಪ ಕುರಿ ಪ್ರಾಸ್ತಾವಿಕ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.