ಗುಲ್ಬರ್ಗಾ

ದಿನಗೂಲಿ ನೌಕರರೆಂದು ನೇಮಿಸಿಕೊಳ್ಳಲು ಒತ್ತಾಯ

Published On :

ಕನ್ನಡಪ್ರಭ ವಾರ್ತೆ  ಶಹಾಪುರ  ಜು.1
ಇಲ್ಲಿಯ ಪುರಸಭೆಯಲ್ಲಿ ಗುತ್ತಿಗೆ ಪೌರಕಾರ್ಮಿಕರೆಂದು ಸುಮಾರು 10 ವರ್ಷಗಳಿಂದ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತ ಬಂದಿದ್ದು, ಟೆಂಡರ್ ರದ್ದುಪಡಿಸಿ ಎನ್‌ಎಂಆರ್ ಆಧಾರದಲ್ಲಿ ನೇಮಕಾತಿ ಮಾಡಿಕೊಂಡು ವೇತನ ಹೆಚ್ಚಿಸಿ ಸೇವೆಯಲ್ಲಿ ಮುಂದುವರಿಸಿಕೊಂಡು ಹೋಗಬೇಕೆಂದು ಆಗ್ರಹಿಸಿ ಪೌರ ಕಾರ್ಮಿಕರು ಮನವಿ ಸಲ್ಲಿಸಿದರು.
  ಪ್ರಸ್ತುತ ದಿನಗಳಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಈಗಿನ ವೇತನ 3 ಸಾವಿರದಲ್ಲಿ ಜೀವನ ನಡೆಸುವುದು ಕಷ್ಟ. ಅದಕ್ಕಾಗಿ ಕನಿಷ್ಠ ವೇತನ 6,600ಕ್ಕೆ ಹೆಚ್ಚಿಸಿ ಪಾವತಿಸಬೇಕು. ಪುರಸಭೆ ಪೌರಕಾರ್ಮಿಕರಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.
ಗುತ್ತಿಗೆದಾರರಿಂದ ಮೋಸ: ಟೆಂಡರ್ ರದ್ದುಪಡಿಸಿ ದಿನಗೂಲಿ ನೌಕರರೆಂದು ನೇಮಕ ಮಾಡಿಕೊಳ್ಳಬೇಕು. ಪೌರಕಾರ್ಮಿಕರಿಗೆ ಗುತ್ತಿಗೆದಾರರು ಬಹಳ ಮೋಸ ಮಾಡುತ್ತಾ ಬಂದಿದ್ದಾರೆ. ಕೇವಲ 2500ರಿಂದ 3 ಸಾವಿರ ಸಂಬಳ ಕೊಡುತ್ತಿದ್ದಾರೆ. ಆದ್ದರಿಂದ ಗುತ್ತಿಗೆ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ 6 ಸಾವಿರ ಚೆಕ್ ಮುಖಾಂತರ ಕೊಡಬೇಕು. ಗುತ್ತಿಗೆದಾರರು ಇಷ್ಟವಾದಂತೆ ಸಂಬಳ ಕೊಡುತ್ತಾರೆ. ಹೀಗಾಗಿ ಜೀವನ ನಿರ್ವಹಣೆಗೆ ಬಹಳ ತೊಂದರೆಯಾಗಿದೆ.
  10 ವರ್ಷಗಳಿಂದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಅದಕ್ಕಾಗಿ ಟೆಂಡರ್ ಕರೆಯದೇ ದಿನಗೂಲಿ ಸಂಬಳ ನೀಡಬೇಕು. ನಾವು ಇಡೀ ಶಹಾಪುರ ಪಟ್ಟಣ ಸ್ವಚ್ಛವಾಗಿ ಮತ್ತು ಎಲ್ಲ ಚರಂಡಿ ತ್ಯಾಜ್ಯ ತೆಗೆದು ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸುತ್ತೇವೆ. ಮನವಿಯನ್ನು ಪರಿಶೀಲಿಸಿ ಗುತ್ತಿಗೆ ಪೌರ ಕಾರ್ಮಿಕರಿಗೆ ನ್ಯಾಯ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ವಿಜಯಕುಮಾರ, ಲಕ್ಷ್ಮಣ, ಬಾಲಕೃಷ್ಣ, ಭೀಮರಾಯ, ನಿಂಗಣ್ಣ, ನಾಗಪ್ಪ, ರಾಜಪ್ಪ, ಧರ್ಮರಾಜ, ಅನಿಲಕುಮಾರ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.