ಭೀಮೆಗೆ ಚರಂಡಿ ನೀರು; ಖಮರುಲ್ ಪರಿಶೀಲನೆ
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜು.1
ಭೀಮಾನದಿ ನೀರಿಗೆ ಗುಲ್ಬರ್ಗ ನಗರದ ಚರಂಡಿ ನೀರು ಸೇರಿ ಕಲ್ಮಶಗೊಳ್ಳುವ ಸರಡಗಿ ಹತ್ತಿರದ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಖಮರುಲ್ ಇಸ್ಲಾಂ ಸೋಮವಾರ ಬೆಳಗ್ಗೆ ಭೇಟಿ ಪರಿಶೀಲಿಸಿ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಮೂಲ ಸೌಕರ್ಯಗಳನ್ನು ಒದಗಿಸಲು ಬದ್ಧವಾಗಿರುವ ಗುಲ್ಬರ್ಗ ನಾಗರಿಕರಿಗೆ ಸರ್ಕಾರ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿದೆ ಸುದ್ದಿಗಾರರಿಗೆ ಸಚಿವರು ತಿಳಿಸಿದರು.
ನೀರು ಶುದ್ಧಿಕರಿಸಲು ಇಲ್ಲಿಯ ಬ್ಯಾರೇಜಿಗೆ ಪೈಪ್‌ಲೈನ್ ಹಾಗೂ ಜಾಕ್‌ವೆಲ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ನಗರಾಭಿವೃದ್ಧಿ ಪ್ರಧಾನ ಕಾರ್ಯದರ್ಶಿಯೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಭೀಮಾ ನದಿಗೆ ಇತರೆ ನೀರು ಸೇರಿದಂತೆ ಶಾಶ್ವತ ಯೋಜನೆ ರೂಪಿಸಲು 13 ಕೋಟಿಯ ಯೋಜನೆ ರೂಪಿಸಲಾಗಿದ್ದು, ಹಾಗರಗುಂಡಿಗೆ ಹತ್ತಿರದ ಕುಡಿಯುವ ನೀರು ಶುದ್ಧೀಕರಣಕ್ಕೆ 30 ಕೋಟಿ ವೆಚ್ಚದಲ್ಲಿ ಬ್ಯಾರೇಜ್ ನಿರ್ಮಾಣ ಮಾಡುವ ಕಾಮಗಾರಿ ಕೈಗೆತ್ತಿಕೊಳ್ಳಲು ಯೋಚಿಸಲಾಗಿದೆ ಎಂದರು.
ಬೇಸಿಗೆ ಕಾಲದಲ್ಲಿಯೂ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಅಧಿಕಾರಿಗಳು ಕ್ರಮ ವಹಿಸಬೇಕು. ಕಪನೂರಿನ ನಿಯೋಜಿತ ಪ್ರದೇಶದಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಪ್ರಸ್ತಾವನೆ ರೂಪಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

