ಸುದ್ದಿ ಸಂಕ್ಷೇಪ
ಎಂ.ಎಸ್ಸಿ ಭೌತಶಾಸ್ತ್ರ ಕೋರ್ಸ್ಗೆ
ಅನುಮತಿ; ಅಭಿನಂದನೆ
ಗುಲ್ಬರ್ಗ: ಗುಲ್ಬರ್ಗ ವಿಶ್ವವಿದ್ಯಾಲಯ ಸಂಲಗ್ನತೆಗೆ ಒಳಪಟ್ಟಿರುವ ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವೇಶ್ವರ ವಿಜ್ಞಾನ ಕಾಲೇಜಿಗೆ 2013- 14ನೇ ಸಾಲಿಗಾಗಿ ಎಂಎಸ್ಸಿ ಭೌತಶಾಸ್ತ್ರ ಕೋರ್ಸ್ ಪ್ರಾರಂಭಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಅಭ್ಯಾಸ ಮಾಡಲು ಅನುಕೂಲ ಮಾಡಿರುವ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಮತ್ತು ಕರ್ನಾಟಕ ಸರ್ಕಾರಕ್ಕೆ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ ಹಾಗೂ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಸವರಾಜ ಎವಲೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಭಾಗದ ವಿದ್ಯಾರ್ಥಿಗಳು ಹೊಸದಾಗಿ ಪ್ರಾರಂಭವಾಗಿರುವ ಎಂಎಸ್ಸಿ ಭೌತಶಾಸ್ತ್ರ ಕೋರ್ಸ್ಗೆ ಪ್ರವೇಶ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರನ್ನು ಸಂಪರ್ಕಿಸಲು ಕೋರಲಾಗಿದೆ.
ಧರ್ಮಯುದ್ಧದಲ್ಲಿ ಗೆದ್ದಿದ್ದೇನೆ: ಗುತ್ತೇದಾರ
ಅಫಜಲ್ಪುರ: ಬಸವಣ್ಣನವರು ಹಾಕಿಕೊಟ್ಟ ಸಾಮಾಜಿಕ ನ್ಯಾಯದ ಸಿದ್ಧಾಂತದ ಅಡಿಯಲ್ಲಿ ಕಳೆದ ಮೂರು ದಶಕಗಳಿಂದ ಕೆಲಸ ಮಾಡಿದ್ದರಿಂದ ಜನ ತಮಗೆ ಆಶೀರ್ವದಿಸಿದ್ದಾರೆ. ಧರ್ಮಯುದ್ಧದಲ್ಲಿ ಗೆದ್ದಂತಾಗಿದೆ ಎಂದು ಶಾಸಕ ಮಾಲಿಕಯ್ಯಾ ಗುತ್ತೇದಾರ ಹೇಳಿದರು. ತಾಲೂಕಿನ ಮಣ್ಣೂರ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ವಿಜಯೋತ್ಸವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ನನ್ನನ್ನು ಸೋಲಿಸಲು ತಾಲೂಕಿನಲ್ಲಿ ಜಾತಿಯ ಲೆಕ್ಕಾಚಾರಗಳು ನಡೆದಿದ್ದವು. ತಾವು ಯಾವಾಗಲೂ ದೇವರು ಮತ್ತು ಸತ್ಯವನ್ನು ನಂಬಿರುವುದರಿಂದ ಕ್ಷೇತ್ರದ ಮತದಾರರು ನನ್ನ ಕೈ ಹಿಡಿದು ಆಶೀರ್ವದಿಸಿದ್ದಾರೆ ಎಂದರು.
ಸಮಸ್ಯೆ ಪರಿಹಾರ ಭರವಸೆ: ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಗಳು ಇರುವುದರಿಂದ ಮತಕ್ಷೇತ್ರದಲ್ಲಿರುವ ಹಳ್ಳಿಗಳ ಹದಗೆಟ್ಟ ರಸ್ತೆಗಳ ಸುಧಾರಣೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಹಾಗೂ ಬಾಕಿ ಉಳಿದಿರುವ ಸಮಸ್ಯೆಗಳನ್ನು ಗುರುತಿಸಿ ಅಭಿವೃದ್ಧಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಚೌಡಾಪುರದಿಂದ ಹೊಸೂರುವರೆಗಿನ ರಸ್ತೆಗೆ ಕರ್ನಾಟಕ ರಾಜ್ಯ ಹೆದ್ದಾರಿ ನಿಗಮ ಯೋಜನೆ ಕೆಶಿಪ್ ಯೋಜನೆ ಅಡಿಯಲ್ಲಿ 175 ಕೋಟಿ ವೆಚ್ಚದ ಕಾಮಗಾರಿಗೆ ಮಂಜೂರಾತಿ ದೊರಕಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಕೆಲಸ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು. ಬಸವಂತರಾಯಗೌಡ ಪಾಟೀಲ್, ಮಕ್ಬೂಲ್ ಪಟೇಲ್, ಮಹಾಂತೇಶ ಪಾಟೀಲ್, ರಮೇಶ ಬಾಕೆ, ವಿಶ್ವನಾಥ ಆಲೂರ, ವಿವೇಕಾನಂದ, ಸುಭಾಷ ವಾಲಿ, ಬಾಬುರಾವ ಮುಜಗೊಂಡ ಇತರರಿದ್ದರು.
ಶೀಘ್ರವೇ ಅಗ್ನಿಶಾಮಕ ಠಾಣೆ ಉದ್ಘಾಟನೆ
ಅಫಜಲ್ಪುರ: ಪಟ್ಟಣದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಅಗ್ನಿಶಾಮಕ ಠಾಣೆಯನ್ನು ಶೀಘ್ರದಲ್ಲಿಯೇ ಉದ್ಘಾಟಿಸಲಾಗುವುದು ಎಂದು ಶಾಸಕ ಮಾಲಿಕಯ್ಯ ಗುತ್ತೇದಾರ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

