ಶರಣಬಸವೇಶ್ವರ ಶಾಲೆಯಲ್ಲಿ ವನಮಹೋತ್ಸವ
ಗುಲ್ಬರ್ಗ: ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆ, ಅಪ್ಪಾ ಪಬ್ಲಿಕ್ ಶಾಲೆ ಸಂಯುಕ್ತಾಶ್ರಯದಲ್ಲಿ ನಗರದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ವನಮಹೋತ್ಸವ ಆಚರಿಸಲಾಯಿತು.
ಸಾಗವಾನಿ ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ. ರಾಧಾದೇವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಪಾಲಕರು ಮತ್ತು ವಿದ್ಯಾರ್ಥಿಗಳು ಕನಿಷ್ಠ ಪಕ್ಷ ಒಂದೊಂದು ಗಿಡ ನೆಟ್ಟರೆ ನಾವು ಭೂಮಿಗೆ ಎಷ್ಟೋ ರೀತಿಯಲ್ಲಿ ಉಪಕಾರ ಮಾಡಿದಂತೆ ಎಂದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನದ ಜತೆಗೆ ಒಂದೊಂದು ಸಸಿಯನ್ನು ಕೊಡುಗೆಯಾಗಿ ನೀಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಸುಮಾರು 200 ಸಸಿಗಳನ್ನು ಅಲ್ಲಿ ನೆರೆದಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಹಂಚಲಾಯಿತು.
ಕುಮಾರಿ ಸಿದ್ದಮ್ಮ ಕಲಶೆಟ್ಟಿ ಬರೆದು ಮಾರ್ಗದರ್ಶಿಸಿದ ಪರಿಸರದ ನಾಟಕ ಚಿಪ್ಕೋ ಚಳವಳಿ ಸಿಬಿಎಸ್ಇ ವಿದ್ಯಾರ್ಥಿಗಳಿಂದ ಪ್ರದರ್ಶಿಸಲ್ಪಟ್ಟಿತ್ತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರ, ಕಾಲೇಜಿನ ಪ್ರಾಚಾರ್ಯ ಎನ್. ಎಸ್. ದೇವರಕಲ್, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.
ಸರೋಜಾ ಫಿರೋಜಾಬಾದ್, ಪ್ರೀತಿ ಬೂದಿಗುಂಪಿ ಮತ್ತು ಸೃಷ್ಟಿ ನಾಗಶೆಟ್ಟಿ ಪ್ರಾರ್ಥನೆ ಗೀತೆ ಹಾಡಿದರು. ಪ್ರಸಾದ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು. ಐಶ್ವರ್ಯ ಲದ್ದೆ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

