ವರದಿಗಾರನ ಮೇಲೆ ನಡೆದ ಹಲ್ಲೆಗೆ ಖಂಡನೆ
ಯಾದಗಿರಿ: ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ವಾಹಿನಿಯೊಂದರ ವರದಿಗಾರನ ಮೇಲೆ ನಡೆದ ಹಲ್ಲೆ ಖಂಡಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ಕುಲಕರ್ಣಿ ನೇತೃತ್ವದಲ್ಲಿ ಪತ್ರಕರ್ತರು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಸಾಮಾನ್ಯ ಜನರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಇಲ್ಲದೆ ಪದೇ ಪದೇ ಹಲ್ಲೆಗಳು ನಡೆಯುತ್ತಿವೆ. ಕಾರಣ ರಾಜ್ಯ ಸರ್ಕಾರ ಅಂಥವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಂದಾಗ ಮಾತ್ರ ಪತ್ರಕರ್ತರು ನಿರ್ಭಯವಾಗಿ ಕೆಲಸ ಮಾಡಲು ಸಾಧ್ಯ. ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದರು.
ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಹತ್ತಿಕುಣಿ, ರಾಘವೇಂದ್ರ ಕೆಂಭಾವಿ, ಪವನ ಕುಲಕರ್ಣಿ, ನಾಗಪ್ಪ ಮಾಲಿಪಾಟೀಲ್, ರವಿ ನರಬೋಳಿ, ನಾಗಪ್ಪ ಕುಂಭಾರ, ರಾಜು ನಳ್ಳಿಕರ್, ಸಾಗರ ದೇಸಾಯಿ, ಇಂದೂಧರ್ ಸಿನ್ನೂರ್, ಮಂಜು ಪತ್ತಾರ್, ಶಶಿಕಾಂತ ಕೋರವಾರ್, ಅನೀಲಸ್ವಾಮಿ, ಸತೀಶ ಮೂಲಿಮನಿ, ದುರ್ಗೇಶ್, ಬಾಪುಗೌಡ, ಸಂಜೀವಕುಮಾರ, ಗಿರೀಶ್, ಸಚಿನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

