ಸಾಂಕ್ರಾಮಿಕ ರೋಗ: ಮುನ್ನೆಚ್ಚರಿಕೆ ವಹಿಸಿ
ಕನ್ನಡಪ್ರಭ ವಾರ್ತೆ ಯಾದಗಿರಿ ಜು.5
ಮಳೆಗಾಲ ಪ್ರಾರಂಭವಾಗಿರುವುದರಿಂದ ಗ್ರಾಮಗಳಲ್ಲಿ ಚರಂಡಿಗಳು ತುಂಬಿ, ತಗ್ಗು ಪ್ರದೇಶಗಳಲ್ಲಿನ ನೀರಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡಬಹುದು. ಆದ್ದರಿಂದ ಸ್ವಚ್ಫತೆ ಕಾಪಾಡುವ ಮೂಲಕ ರೋಗ ಹರಡದಂತೆ ಎಲ್ಲ ಗ್ರಾಪಂಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಪಂ ಇಒ ಶಿವರಾಮ ಚವ್ಹಾಣ ಸೂಚಿಸಿದ್ದಾರೆ.
ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡಲು ಎಲ್ಲ ಚರಂಡಿಗಳನ್ನು ಸ್ವಚ್ಫಗೊಳಿಸಿ ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ವಹಿಸಬೇಕು. ತಗ್ಗು ಪ್ರದೇಶದಲ್ಲಿ ನಿಂತ ಚರಂಡಿಯ ನೀರನ್ನು ಚಿಕ್ಕ ನಾಲೆ ನಿರ್ಮಿಸಿ ಹೊರಗೆ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಚರಂಡಿ ಸುತ್ತಮುತ್ತ ತಗ್ಗು ಪ್ರದೇಶಗಳಲ್ಲಿ ನಿಂತ ನೀರಿನ ಮೇಲೆ ಬ್ಲೀಚಿಂಗ್ ಪೌಡರ್ ಸಿಂಪಡಿಸಿ ಸಾಂಕ್ರಾಮಿಕ ರೋಗ ತಡೆಗಟ್ಟಬೇಕು.
ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ: ಗ್ರಾಮಗಳಲ್ಲಿ ಎಲ್ಲಿಯೂ ಹೊಲಸು ನೀರು ನಿಲ್ಲದಂತೆ ಕ್ರಮ ತೆಗೆದುಕೊಳ್ಳಬೇಕು. ಕುಡಿಯುವ ನೀರಿನ ಪೈಪ್ನಲ್ಲಿ ಚರಂಡಿ ನೀರು ಸೇರದಂತೆ ಒಡೆದು ಹಾಗೂ ಹಾಳಾದ ಪೈಪ್ಗಳನ್ನು ದುರಸ್ತಿಗೊಳಿಸಬೇಕೆಂದು ಎಲ್ಲ ಪಿಡಿಒಗಳಿಗೆ ಸೂಚಿಸಿದ್ದಾರೆ.
ಅವಶ್ಯವಿದ್ದಲ್ಲಿ ಹೊಸ ಪೈಪ್ ಅಳವಡಿಸಬೇಕು. ಕುಡಿಯುವ ನೀರಿನ ಮೂಲಗಳಾದ ಕೊಳವೆಬಾವಿ, ಕೈಪಂಪು, ತೆರೆದಬಾವಿ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಸ್ವಚ್ಫಗೊಳಿಸಬೇಕು. ಬ್ಲೀಚಿಂಗ್ ಪೌಡರ್ ಸಿಂಪಡಿಸಬೇಕು. ಓವರ್ಹೆಡ್ ಟ್ಯಾಂಕ್ಗಳನ್ನು ಪ್ರತಿ 15 ದಿನಗಳಿಗೊಮ್ಮೆ ತೊಳೆದು ಬ್ಲೀಚಿಂಗ್ ಪೌಡರ್ ಹಾಕಿ ಕ್ಲೋರಿನೇಶನ್ ಮಾಡಬೇಕು. ಗ್ರಾಮಸ್ಥರಿಗೆ ಸ್ವಚ್ಫ ಹಾಗೂ ಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಬೇಕು. ನೀರಿನ ಟ್ಯಾಂಕ್ ಸ್ವಚ್ಫಗೊಳಿಸಿದ ಬಗ್ಗೆ ದಿನಾಂಕ ನಮೂದಿಸಬೇಕು.
ಚಿಕಿತ್ಸೆ ವ್ಯವಸ್ಥೆ ಕಲ್ಪಿಸಿ: ಸೊಳ್ಳೆಗಳು ಹರಡದಂತೆ ಎಲ್ಲ ಗ್ರಾಮಗಳಲ್ಲಿ ಫಾಗಿಂಗ್ ಮಾಡಬೇಕು. ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನಚರಿಕೆ ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಯಾವುದೇ ಸಾಂಕ್ರಾಮಿಕ ರೋಗ, ವಾಂತಿ- ಭೇದಿ ಪ್ರಕರಣಗಳು ಉಲ್ಬಣಿಸಿದರೆ ತಕ್ಷಣವೇ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು.
ಗ್ರಾಮಸ್ಥರ ಮನೆಗಳಲ್ಲಿರುವ ನೀರಿನ ಸಂಗ್ರಹಾಗಾರಗಳನ್ನು ಸ್ವಚ್ಫವಾಗಿ ತೊಳೆದು ನೀರು ಉಪಯೋಗಿಸುವಂತೆ ಡಂಗುರು ಸಾರಿ ತಿಳಿವಳಿಕೆ ನೀಡಬೇಕು. ವಾಂತಿ- ಭೇದಿ ಪ್ರಕರಣಗಳನ್ನು ಕಂಡು ಬಂದಲ್ಲಿ ತಕ್ಷಣವೇ ಕುಡಿವ ನೀರನ್ನು ಕಾಯಿಸಿ ಆರಿಸಿ ಕುಡಿಯುವಂತೆ ಡಂಗುರ ಸಾರಿ ಜಾಗೃತಿ ಮೂಡಿಸಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಎಲ್ಲ ಪಂಪ್ ಅಪರೇಟರ್ಗಳನ್ನು ಈ ನಿಟ್ಟಿನಲ್ಲಿ ಸೂಕ್ತ ನಿಗಾ ವಹಿಸಲು ಸೂಚಿಸಲಾಗಿದೆ.
ಈ ಮೇಲಿನ ಅಂಶಗಳ ಬಗ್ಗೆ ಸೂಕ್ತ ಗಮನಹರಿಸಿ ಸ್ವಚ್ಫತೆ ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ಇದಕ್ಕೆ ತಪ್ಪಿದಲ್ಲಿ ಸಂಬಂಧಿಸಿದ ಗ್ರಾಪಂ.ಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಪಂಪ್ ಆಪರೇಟರ್ಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚವ್ಹಾಣ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

