ಕ್ರೀಡೆಯಲ್ಲಿ ಗ್ರಾಮೀಣರಿಗೆ ಉತ್ತೇಜನ: ಸೂಗಪ್ಪ
ಯಾದಗಿರಿ: ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆಯಲ್ಲೂ ತೊಡಗಿಕೊಳ್ಳುವುದರಿಂದ ಅವರ ಸರ್ವಾಂಗೀಣ ಪ್ರಗತಿಗೆ ನೆರವಾಗುತ್ತದೆ. ಅಲ್ಲದೇ ಗ್ರಾಮೀಣ ಮಕ್ಕಳ ಪ್ರತಿಭೆ ಹೊರಹಾಕಲು ವೇದಿಕೆ ಸಿಕ್ಕಂತಾಗುತ್ತದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸೂಗಪ್ಪ ಪಾಟೀಲ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಿರಿಜನ ಉಪ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ 10 ದಿನಗಳ ಕ್ರೀಡಾನ್ವೇಷಣೆ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶನಿವಾರ ಮಾತನಾಡಿದರು.
ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ ಕ್ರೀಡಾನ್ವೇಷಣೆ ತರಬೇತಿಯಲ್ಲಿ ಸುಮಾರು 64 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಅವರ ದೈನಂದಿನ ವಿದ್ಯಾಭಾಸಕ್ಕೆ ತೊಂದರೆಯಾಗದಂತೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಎರಡು ಗಂಟೆಗಳ ಕಾಲ ತರಬೇತಿಯನ್ನು ನೀಡಲಾಗಿದೆ. ಗ್ರಾಮೀಣ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರನ್ನು ಉತ್ತಮ ಕ್ರೀಡಾಪಟುಗಳಾಗಿ ಉತ್ತೇಜನ ನೀಡಲು ಈ ಕ್ರೀಡಾನ್ವೇಷಣೆ ಅನುಕೂಲವಾಗಿದೆ ಎಂದರು.
ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮರಾವ ಕಂದಕೂರ ಮಾತನಾಡಿ, ಕ್ರೀಡಾ ಚಟುವಟಿಕೆಗಳ ಮೂಲಕ ಬದುಕು ಕಟ್ಟುವ ಕಾಯಕ ಆಗಬೇಕಿದೆ. ಆತ್ಮ ವಿಶ್ವಾಸದ ಬದುಕಿಗೆ ಮತ್ತು ಜೀವನ ಪ್ರೀತಿಗೆ ಕ್ರೀಡೆ ಸಹಕಾರಿ ಎಂದರು. ದೈಹಿಕ ಶಿಕ್ಷಕ ಬಿ.ಸಿ. ಪಾಟೀಲ್, ತರಬೇತಿದಾರರಾದ ವಿಶ್ವನಾಥ, ಕಾಂತಪ್ಪ ಬಾಗಲಿ, ಬಸವರಾಜ, ಮಂಜುನಾಥ, ಮಲ್ಲು ಮಾರಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

