ತಹಸೀಲ್ದಾರರಿಂದ ಅಕ್ರಮ ಮರಳು ವಶ
ಜೇವರ್ಗಿ: ಪಟ್ಟಣದ ಹೊರವಲಯದಲ್ಲಿರುವ ಮಿಕ್ ಸಿಮೆಂಟ್ ಕಾರ್ಖಾನೆ ಹಿಂಭಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ ಎಂಬ ಕರವೇ ಪ್ರವೀಣಶೆಟ್ಟಿ ಬಣದ ಕಾರ್ಯಕರ್ತರ ದೂರಿನ ಮೇರೆಗೆ ತಹಸೀಲ್ದಾರ್ ಎಂ.ಎನ್. ಗೋಠೆ ಅವರು ಶನಿವಾರ ಸ್ಥಳ ಪರಿಶೀಲಿಸಿ ಅಕ್ರಮ ಮರಳನ್ನು ವಶಪಡಿಸಿಕೊಂಡರು.
ಸುಮಾರು 40 ಟಿಪ್ಪರ್ ಮರಳು ಸಂಗ್ರಹಿಸಿ, ಟಿಪ್ಪರ್ ಮೂಲಕ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಅರಿತ ಕರವೇ ಘಟಕದ ತಾಲೂಕು ಅಧ್ಯಕ್ಷ ಶಂಕರಗೌಡ ಪಾಟೀಲ್ ಹಾಲಗಡ್ಲಾ ಹಾಗೂ ಕಾರ್ಯಕರ್ತರ ನಿಯೋಗ ಮರಳು ಸಾಗಿಸುತ್ತಿದ್ದ ಟಿಪ್ಪರ್ ತಡೆದು ತಹಸೀಲ್ದಾರ್ಗೆ ಮಾಹಿತಿ ನೀಡಿದರು.
ನಂತರ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಪರಿಶೀಲನೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರಮೊಂದನ್ನು ಜೇವರ್ಗಿ ಪೊಲೀಸರ ವಶಕ್ಕೆ ಒಪ್ಪಿಸಿದರು ಹಾಗೂ ಅಕ್ರಮವಾಗಿ ಸಂಗ್ರಹಿಸಿ ಇಡಲಾದ ಸುಮಾರು 40 ಟ್ರಿಪ್ ಮರಳನ್ನು ಲೋಕೋಪಯೋಗಿ ಇಲಾಖೆ ವಶಕ್ಕೆ ಒಪ್ಪಿಸಿದರು.
ತಾಲೂಕಿನ ಅನೇಕ ಕಡೆಗಳಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಇಡಲಾಗಿದ್ದು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಇದ್ದರು ಜಾಣ ಕುರುಡರಂತೆ ಮೌನ ವಹಿಸಿದ್ದಾರೆ. ಈ ಅಕ್ರಮ ದಂಧೆ ಹಿಂದೆ ಈ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದು, ಜಿಲ್ಲೆಯಿಂದ ಒಂದು ತಂಡ ರಚಿಸಿ ಅಕ್ರಮ ಮರಳನ್ನು ವಶಪಡಿಸಿಕೊಂಡು ಸರ್ಕಾರಕ್ಕೆ ಆಗುತ್ತಿರುವ ಹಾನಿಯನ್ನು ಕೂಡಲೇ ತಪ್ಪಿಸಬೇಕು.
ಇಲ್ಲದಿದ್ದಲ್ಲಿ ತಾವು ಹೋರಾಟ ಮಾಡುವುದಾಗಿ ಕರವೇ ಮುಖಂಡರು ಎಚ್ಚರಿಸಿದರು.
ಕರವೇ ಘಟಕದ ಅಂಬರೀಶ ರಾಠೋಡ, ಸಂತೋಷ ಗುಡುರು, ರವಿಚಂದ್ರ ಗುತ್ತೇದಾರ, ಸುರೇಶ ಕುನ್ನೂರ್, ಲಿಂಗಣ್ಣ ಪೂಜಾರಿ, ಸಂತೋಷ ಬಾವಿ, ದೀಪಕ ಜಾದವ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

