ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಕ್ಕೆ ಖಂಡನೆ
ಗುಲ್ಬರ್ಗ: ಗುಲ್ಬರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತೀಶಕುಮಾರ್ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿರುವ ಹೈ.ಕ. ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ ಮತ್ತು ಗೌರವ ಕಾರ್ಯದರ್ಶಿ ಬಸವರಾಜ ಹಡಗಿಲ್ ಕೂಡಲೇ ಅವರ ವರ್ಗಾವಣೆ ಆದೇಶ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೇವಲ ಒಂದು ವರ್ಷದಲ್ಲಿಯೇ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿದ್ದು ಸರಿಯಾದ ಕ್ರಮವಲ್ಲ. ಅವರು ತಮ್ಮ ಅಧಿಕಾರಾವಧಿಯಲ್ಲಿ ವಾಣಿಜ್ಯ ಮತ್ತು ವರ್ತಕ ಸಮುದಾಯದ ಸದಸ್ಯರ ಮತ್ತು ಸಾರ್ವಜನಿಕರ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಅವರು ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವಲ್ಲಿ ಸಾಕಷ್ಟು ಸುಧಾರಣೆಯ ಕ್ರಮಗಳನ್ನು ಕೈಗೊಂಡಿದ್ದರಿಂದ ಇಂತಹ ದಕ್ಷ ಮತ್ತು ಪ್ರಾಮಾಣಿಕ ವರಿಷ್ಠಾಧಿಕಾರಿ ಸೇವೆಯನ್ನು ಈ ಜಿಲ್ಲೆಗೆ ಮುಂದುವರಿಸಿ, ಅವರಿಗೆ ಸೇವೆ ಸಲ್ಲಿಸಲು ಹೆಚ್ಚಿನ ಕಾಲಾವಧಿಯನ್ನು ಕಲ್ಪಿಸಿದ್ದಲ್ಲಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದಲ್ಲದೇ ಇನ್ನೂ ಹೆಚ್ಚಿನ ಸುಧಾರಣೆಗಳನ್ನು ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

