ಹುಣಸಗಿ: ಬಸವೇಶ್ವರ ಪುತ್ಥಳಿಗೆ ಭವ್ಯ ಸ್ವಾಗತ
ಹುಣಸಗಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಷ್ಠಾಪಿಸಲು ನಿರ್ಮಿಸಲಾಗಿರುವ ಭಕ್ತಿ ಭಂಡಾರಿ ಬಸವೇಶ್ವರರ ಪುತ್ಥಳಿ ಭಾನುವಾರ ನಗರಕ್ಕೆ ತರಲಾಗಿದ್ದು, ಪಟ್ಟಣದ ಜನರು ಮೆರವಣಿಗೆ ಮೂಲಕ ಪುತ್ಥಳಿ ಮೆರವಣಿಗೆ ಮಾಡಿ ಸ್ವಾಗತ ಮಾಡಿಕೊಂಡರು. ಪಟ್ಟಣದ ಜನರ ಹಲವು ವರ್ಷಗಳ ಕನಸು ಇದೀಗ ನನಸಾಗುತ್ತಿರುವುದು ತುಂಬಾ ಖುಷಿ ತಂದಿದೆ. ಇನ್ನೂ ಕೆಲವೇ ತಿಂಗಳಲ್ಲಿ ಪುತ್ಥಳಿಯ ಅನಾವರಣ ಕಾರ್ಯ ನಡೆಯಲಿದೆ ಎಂದು ಬಸವ ಸಮಿತಿಯ ಅಧ್ಯಕ್ಷ ಚನ್ನಯ್ಯಸ್ವಾಮಿ ಹಿರೇಮಠ ತಿಳಿಸಿದರು. ಸೊಲ್ಲಾಪುರದ ಶಿಲ್ಪಿಯೊಬ್ಬರು ನಿರ್ಮಿಸಿದ ಈ ಪುತ್ಥಳಿಯನ್ನು ವಾಹನವೊಂದರಲ್ಲಿ ಪಟ್ಟಣಕ್ಕೆ ತಂದಾಗ ಪಟ್ಟಣದ ಪ್ರಮುಖರು, ಸಾರ್ವಜನಿಕರು ಸಂಭ್ರಮದೊಂದಿಗೆ ಮೆರವಣಿಗೆ ಮೂಲಕ ಪ್ರತಿಷ್ಠಾಪಿಸಲಿರುವ ವೃತ್ತದ ಸ್ಥಳದವರೆಗೆ ತರಲಾಯಿತು. ಕೆಲವೇ ತಿಂಗಳಲ್ಲಿ ಪತ್ಥಳಿಯ ಅನಾವರಣ ಕಾರ್ಯಕ್ರಮಕ್ಕೆ ಮಠಾಧೀಶರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆಂದು ಚನ್ನಯ್ಯಸ್ವಾಮಿ ಹಿರೇಮಠ ಹೇಳಿದರು.
ವಿಶ್ವವಿದ್ಯಾಲಯ ಸ್ಥಾಪಿಸುವ ಕನಸು ನನ್ನದು: ಡಾ. ಅಜಯ್ ಸಿಂಗ್
ಜೇವರ್ಗಿ: ತಾಲೂಕಿನ ಗ್ರಾಮೀಣ ಪ್ರದೇಶದ ಬಡ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಜೇವರ್ಗಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸುವ ಕನಸು ನನ್ನದು ಎಂದು ಶಾಸಕ ಡಾ. ಅಜಯಸಿಂಗ್ ತಿಳಿಸಿದರು.
ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ತಮ್ಮ ತಂದೆ ಎನ್. ಧರ್ಮಸಿಂಗ್ ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ಶೈಕ್ಷಣಿವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮುಂದೆ ಬರುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು, ಆ ನಿಟ್ಟಿನಲ್ಲಿ ಶೈಕ್ಷಣಿಕ ಕ್ರಾಂತಿ ನಡೆಸಬೇಕಾಗಿದೆ ಎಂದರು. ಇದೇ ಸಂದರ್ಭದಲ್ಲಿ ಪಿಯುಸಿ ಹಾಗೂ ಎಸ್ಎಸ್ಎಲ್ಸಿಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಡಾ. ಅಜಯಸಿಂಗ್ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಡಿ.ಬಿ. ಪಾಟೀಲ್, ತಾಲೂಕು ಅಧ್ಯಕ್ಷ ವಿ.ಬಿ. ಹಿರೇಗೌಡ ಸೇರಿದಂತೆ ತಾಲೂಕಿನ ಸರ್ಕಾರಿ ನೌಕರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

