ನಗರದಲ್ಲಿ ಇಂದು ವಿಶ್ವ ಜನಸಂಖ್ಯಾ ದಿನಾಚರಣೆ
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜು.10
ಜಿಪಂ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜು.11ರಂದು ಆರೋಗ್ಯ ನಿರೀಕ್ಷಕರ ತರಬೇತಿ ಕೇಂದ್ರದಲ್ಲಿ ಜಿಲ್ಲಾಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಗುವುದು.
ಜಿಪಂ ಅಧ್ಯಕ್ಷ ಶರಣಪ್ಪ ಪಾಟೀಲ್ ವಿ. ತೇಲ್ಕೂರ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವರಾಜ ಸಜ್ಜನಶೆಟ್ಟಿ, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಪಾರ್ವತಿಬಾಯಿ ಚವ್ಹಾಣ, ಜಿಲ್ಲಾ ಶಸ್ತ್ರಜ್ಞರಾದ ಡಾ. ನಳಿನಿ ನಮೋಶಿ ಭಾಗವಹಿಸುವರು.
ಎಂಆರ್‌ಎಂಸಿ ಗುಲ್ಬರ್ಗ ಪ್ರಾಧ್ಯಾಪಕ ಡಾ. ಪಲ್ಲವಿ ಟೆಂಗಳಿಕರ್ ಅತಿಥಿ ಉಪನ್ಯಾಸ ನೀಡುವರು. ಈ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಿಂದ ಬೆಳಗ್ಗೆ 9.30ಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಪಂಚಾಯತ್ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಅಶೋಕ ಸಾವಳೇಶ್ವರ ಜಾಥಾ ಉದ್ಘಾಟಿಸುವರು.
ರೆಡ್‌ಕ್ರಾಸ್ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಗುಲ್ಬರ್ಗ ಜಿಲ್ಲಾ ಶಾಖೆ ಮತ್ತು ವೀರಮ್ಮ ಗಂಗಸಿರಿ ಮಹಿಳಾ ಕಾಲೇಜುಗಳ ಸಹಯೋಗದಲ್ಲಿ ಜು.11 ರಂದು ಬೆಳಿಗ್ಗೆ 11.45ಕ್ಕೆ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಗುವುದು.
ಹೈ-ಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ. ನಮೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವೈದ್ಯರಾದ ಡಾ. ಪಿ.ಎಸ್. ಶಂಕರ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿ ಉಪನ್ಯಾಸಕರಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಡಾ. ಟಿ. ಗುರುಬಸಪ್ಪ ಆಗಮಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

