ಗುಲ್ಬರ್ಗಾ

ಹಾಗರಗಾ; ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಮನವಿ

Published On :

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜು.10
ಹಾಗರಗಾ ಗ್ರಾಮದಲ್ಲಿ ಬರುವ ಸರಸ್ವತಿ ನಗರ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಬೇಕು ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಗುಲ್ಬರ್ಗ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ.
ಗ್ರಾಮದ ಸುಮಾರು 15ರಿಂದ 20 ಮನೆಗಳ ಮೇಲೆ ವಿದ್ಯುತ್ ತಂತಿಗಳು ಹಾದುಹೋಗಿದ್ದು, ಜನತೆ ಅಪಾಯದಲ್ಲಿ ಬದುಕುತ್ತಿದ್ದು, ಇತ್ತೀಚೆಗೆ ಉಮೇಶ ಭೀಮಯ್ಯ ಗುತ್ತೇದಾರ ಎಂಬುವರು ವಿದ್ಯುತ್ ತಂತಿ ತಗುಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಇದೇ ತರಹ ಸಾರ್ವಜನಿಕರು ವಿವಿಧ ತೊಂದರೆಗಳು ಅನುಭವಿಸುತ್ತಿದ್ದಾರೆ.
ಮನೆಯ ಮಾಲೀಕರು ಮನೆಯ ಛಾವಣಿ ಏರುವ ಹಾಗಿಲ್ಲ ಮತ್ತು ಓಡಾಡೋ ಹಾಗಿಲ್ಲ ಮತ್ತು ಮಳೆ ಬಂದರೆ ಮನೆಯಲ್ಲ ವಿದ್ಯುತ್ ಹರಿಯುತ್ತದೆ. ಇದರಿಂದ ಯಾವುದೇ ಕುಟುಂಬದವರು ಮನೆಯಲ್ಲಿ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ಕೂಡಲೇ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಬೇಕು ಎಂದು ಮಂಜುನಾಥ ಹಾಗರಗಿ, ಶಿವಕುಮಾರ್ ಬಿರಾದಾರ ಹಾಗೂ ನಾಗೇಂದ್ರ ಕೋರವಾರ್ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.