ಗುಲ್ಬರ್ಗಾ

ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ

Published On :

ಗುಲ್ಬರ್ಗ: ಗುಲ್ಬರ್ಗ ರೇಲ್ವೆ ವಿಭಾಗ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಭಾಗಣಗೌಡ ಗುರುವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.
ವಾರದಲ್ಲಿ ಮೂರು ದಿವಸ ಸಂಚರಿಸುವ ಸೋಲಾಪುರ- ಯಶವಂತಪುರ ರೈಲು ದಿನಾಲು ಸಂಚರಿಸುವಂತೆ ಮಾಡಬೇಕು. ಗುಲ್ಬರ್ಗ- ಬೀದರ್ ರೇಲ್ವೆ ಮಾರ್ಗ ಆದಷ್ಟು ಬೇಗ ಮುಗಿಸಬೇಕು. ಗುಲ್ಬರ್ಗದಲ್ಲಿ ರೇಲ್ವೆ ಬೋಗಿ ಮತ್ತು ರೇಲ್ವೆ ಚಕ್ರ ಉತ್ಪಾದನಾ ಘಟಕ ಸ್ಥಾಪಿಸಬೇಕು. ಸೇಡಂ ಮತ್ತು ಚಿತ್ತಾಪುರದಲ್ಲಿ ಗರೀಬರಥ ರೇಲು ನಿಲುಗಡೆ ಮಾಡಬೇಕು. ವಾಡಿ ಗದಗ ರೇಲು ಮಾರ್ಗ ಕಾಮಗಾರಿ ಶೀಘ್ರ ಪ್ರಾರಂಭಿಸಬೇಕೆಂದು ಮನವಿ ಮಾಡಿದರು.
ಬಿಜಾಪುರದಿಂದ ಮುಂಬಯಿಗೆ ಹೋಗುವ ಫಾಸ್ಟ್ ಫ್ಯಾಸೆಂಜರ್ ರೇಲಿನ ಹಾಗೆ ಗುಲ್ಬರ್ಗದಿಂದ ಬೆಂಗಳೂರಿಗೆ ಹೊಸದಾಗಿ ಫಾಸ್ಟ್ ಪ್ಯಾಸೆಂಜರ್ ರೈಲು ಓಡಿಸಬೇಕು. ಗುಲ್ಬರ್ಗದಿಂದ ಬೆಂಗಳೂರಿಗೆ ಹೊಸದಾಗಿ ಗರೀಬರಥ ರೈಲು ಓಡಿಸಬೇಕು. ಗುಲ್ಬರ್ಗದಲ್ಲಿ ಹೊಸದಾಗಿ 4 ರೇಲ್ವೆ ಕೌಂಟರ್‌ಗಲನ್ನು ತೆರೆಯಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.