ಭಾಷಣ ರೂಢಿಸಿಕೊಂಡರೆ ಭಾಷೆ ಮೇಲೆ ಪ್ರಭುತ್ವ
ಕನ್ನಡಪ್ರಭ ವಾರ್ತೆ, ರಾಯಚೂರು, ಜು.14
ವಿದ್ಯಾರ್ಥಿಗಳು ಧೈರ್ಯದಿಂದ ಭಾಷಣದ ವಿಷಯಕ್ಕೆ ಸಂಬಂಧ ಪಟ್ಟ ಉತ್ತಮ ಅಂಶಗಳನ್ನು ಸಂಗ್ರಹಿಸಿ ಭಾಷಣ ಮಾಡುವುದನ್ನು ಕಲಿತುಕೊಳ್ಳಬೇಕು. ಇದರಿಂದ ವಿಷಯ ಹಾಗೂ ಭಾಷೆಯ ಮೇಲೆ ಪ್ರಭುತ್ವ ಸಾಧಿಸಲು ಸಾಧ್ಯವಾಗುತ್ತದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಗೌತಮ ಮೆಹ್ತಾ ಹೇಳಿದರು.
ಅವರು ಸ್ವಾಮಿ ವಿವೇಕಾನಂದರ 150ನೇ ವರ್ಷಾಚರಣೆಯಂಗವಾಗಿ ಜು. 16ರಂದು ನಗರಕ್ಕೆ ಆಗಮಿಸಲಿರುವ ಸ್ವಾಮಿ ವಿವೇಕಾನಂದ ರಥಯಾತ್ರೆ ಪ್ರಯುಕ್ತ ನಗರದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ದುದ್ದುಪೂಡಿ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ 'ಸ್ವಾಮಿ ವಿವೇಕಾನಂದರ ಆದರ್ಶಗಳು' ಎಂಬ ಭಾಷಣ ಸ್ಪರ್ಧಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮಾರ್ಗದರ್ಶನ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ರಮಾದೇವಿ ಶಂಭೋಜಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಪುಸ್ತಕಗಳನ್ನು ಓದುವುದರ ಜೊತೆಗೆ ಒಳ್ಳೆ ಉಪನ್ಯಾಸಕರ ಉಪನ್ಯಾಸ ಕೇಳುವುದು ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಆತ್ಮವಿಶ್ವಾಸದಿಂದ ಮಾತನಾಡುವ ಕಲೆಯನ್ನು ಕರಗತ ಮಾಡಿಕೊಂಡಲ್ಲಿ ಉತ್ತಮ ಭಾಷಣಕಾರರಾಗಬಹುದು ಎಂದರು.
ಕಸಾಪ ಮಾಜಿ ಅಧ್ಯಕ್ಷ ವೆಂಕನಗೌಡ ವಟಗಲ್, ಎನ್.ವಿ. ಸತ್ಯನಾರಾಯಣ ಕಾರ್ಯಕ್ರಮ ಕುರಿತು ಮಾತನಾಡಿದರು. ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ ಕೌದಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ನಾಗರಾಜ, ಕೆ. ಜಗದೀಶ ಉಪಸ್ಥಿತರಿದ್ದರು. ಕಸಾಪ ಗೌರವ ಕಾರ್ಯದರ್ಶಿ ವೀರೇಶ ಗೋನವಾರ ಸ್ವಾಗತಿಸಿದರು. ಸಿಆರ್ಪಿ ರಾಮದಾಸ್ ವಂದಿಸಿದರು. ಬೀರಪ್ಪ ಶಂಭೋಜಿ ನಿರೂಪಿಸಿದರು.
ಸ್ಪರ್ಧಾ ವಿಜೇತರು: ಭಾಷಣ ಸ್ಪರ್ಧಾ ಕಾರ್ಯಕ್ರಮದಲ್ಲಿ ದುದ್ದುಪೂಡಿ ಮಹಿಳಾ ಪದವಿ ಪೂರ್ವ ಕಾಲೇಜಿನ ಶಿವಾನಿ ಪ್ರಥಮ ಸ್ಥಾನ, ವಾಸವಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಶ್ರುತಿ ದ್ವಿತೀಯ ಸ್ಥಾನ, ಅನಿಕೇತನ ಪದವಿ ಪೂರ್ವ ಕಾಲೇಜಿನ ಮುತ್ತಣ್ಣ ಹಾಗೂ ಹನುಮಂತ ತೃತೀಯ ಸ್ಥಾನ ಪಡೆದುಕೊಂಡರು. ವಿವೇಕಾನಂದರ ರಥಯಾತ್ರೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದೆಂದು ಪ್ರಚಾರ ಸಮಿತಿ ಸದಸ್ಯ ಬೀರಪ್ಪ ಶಂಭೋಜಿ ತಿಳಿಸಿದ್ದಾರೆ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

