ಗುಲ್ಬರ್ಗಾ

ಬಸವಸಾಗರ ಭರ್ತಿಗೆ 1 ಮೀಟರ್ ಬಾಕಿ

Published On :

ಯಾದಗಿರಿ: ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಆಲಮಟ್ಟಿಯಿಂದ 22,900 ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಡ್ಯಾಂ ಭರ್ತಿಯಾಗಲು ಕೇವಲ 1ಮೀಟರ್ ಬಾಕಿಯಿದೆ. ಜಲಾಶಯದ ಒಟ್ಟು ಎತ್ತರ 492.25 ಮೀಟರ್ ಇದ್ದು, ಸದ್ಯ 491.02 ಮೀಟರ್ ನೀರು ಸಂಗ್ರಹವಾಗಿದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ 882 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಲ್ಲಿ ನಾರಾಯಣಪುರ ಎಡ ಹಾಗೂ ಬಲದಂಡೆ ಕಾಲುವೆಗೆ ತಲಾ 200 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ ಎಂದು ಕೆಬಿಜೆಎನ್ನೆಲ್ ಮೂಲಗಳು ತಿಳಿಸಿವೆ.
ವೈದ್ಯಾಧಿಕಾರಿ ಹುದ್ದೆ:  ಅರ್ಜಿ ಅಹ್ವಾನ
ಯಾದಗಿರಿ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದು ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಎಂಬಿಬಿಎಸ್ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ 8 ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದ್ದು, ಜು.27 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಮಾದ್ವಾರ, ನಗನೂರ, ಶ್ರೀನಿವಾಸಪುರ, ಸಗರ, ಗುರುಮಠಕಲ್, ಅರಕೇರಾ, ಹುಣಸಗಿ, ವಡಗೇರಾದಲ್ಲಿ  ಸೇವೆ ಸಲ್ಲಿಸಬೇಕು. ಅರ್ಜಿ ಹಾಗೂ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ಹತ್ತಿಕುಣಿಯಲ್ಲಿ ವನಮಹೋತ್ಸವ  
ಯಾದಗಿರಿ: ತಾಲೂಕಿನ ಹತ್ತಿಕುಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿ ಶಾಲೆಯ ಆವರಣದಲ್ಲಿ ಭೀಮರಾಯಗುಡಿ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಸಸಿಗಳನ್ನು ನೆಡುವ ಮೂಲಕ ಸೋಮವಾರ ವನಮಹೋತ್ಸವ ಆಯರಿಸಿದರು.  ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಯ ಚಂದಪ್ಪ ಚಿಕ್ಕಮೇಟಿ, ಗ್ರಾಮೀಣ ಜನತೆಯಲ್ಲಿ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯ. ಅರಣ್ಯ ಪ್ರದೇಶ ದಿನದಿಂದ ದಿನಕ್ಕೆ ನಾಶವಾಗುತ್ತಿರುವುದು ದೇಶದ ದುರಂತ. ಪರಿಣಾಮ ಇಂದು ನಾವು ಅದರ ತೊಂದರೆಗಳನ್ನು ಎದುರಿಸುತ್ತಿದ್ದೇವೆ. ಎಲ್ಲರೂ ಗಿಡಮರಗಳನ್ನು ರಕ್ಷಿಸಿದಲ್ಲಿ ಆರೋಗ್ಯಕರ ವಾತಾವರಣ ಸೃಷ್ಟಿಯಾಗಲು ಸಾಧ್ಯ ಎಂದು ಹೇಳಿದರು.ಡಾ. ವಾಸುದೇವ ಪಾಲ್ತೆ ಮಾತನಾಡಿ, ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ಪ್ರಗತಿಗೆ ನಿಸರ್ಗದ ಸಹಕಾರ ಅಗತ್ಯವಾಗಿದೆ. ಮಕ್ಕಳು ಮನೆ ಅಂಗಳದಲ್ಲಿ ಗಿಡಮರಗಳನ್ನು ಬೆಳೆಸಬೇಕು ಎಂದರು.ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪರಶುರಾಮ, ಜ್ಯೋತಿರ್ಲಿಂಗ, ಗೊಲ್ಲಾಳಪ್ಪ ಇದ್ದರು. ಕೃಷಿ ಕಾಲೇಜಿನ ವಿದ್ಯಾರ್ಥಿ ಗಿರೀಶ್ ಪ್ರಾಸ್ತಾವಿಕ ಮಾತನಾಡಿದರು. ವೈಜನಾಥ ಸ್ವಾಗತಿಸಿದರು. ಶರಣಬಸಪ್ಪ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.