ನಗರದಲ್ಲಿ ಮೂಲಭೂತ ಸೌಲಭ್ಯಕ್ಕೆ ಆಗ್ರಹ
ಯಾದಗಿರಿ: ಜಿಲ್ಲಾ ಕೇಂದ್ರವಾದ ಬಳಿಕ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಅದಕ್ಕೆ ತಕ್ಕಂತೆ ಸರಿಯಾದ ಮೂಲಭೂತ ಸೌಲಭ್ಯಗಳು ಒದಗಿಸುವುದು ಅಗತ್ಯವಾಗಿದೆ. ಶುದ್ಧ ಕುಡಿಯುವ ನೀರಿನ ಮತ್ತು ನಗರದ ಬಹುತೇಕ ಬಡಾವಣೆಗಳಲ್ಲಿ ರಸ್ತೆ ನಿರ್ಮಾಣವಾಗಬೇಕು ಎಂದು ನಗರಸಭೆ ಮಾಜಿ ಉಪಾಧ್ಯಕ್ಷ ಮಲ್ಲಯ್ಯ ಗೊಂದೆನೋರ ಆಗ್ರಹಿಸಿದ್ದಾರೆ.
ನಗರದ ಜನಸಂಖ್ಯೆಗೆ ತಕ್ಕಂತೆ ಸರಿಯಾದ ಮೂಲಭೂತ ಸೌಕರ್ಯಗಳು ಆಗಬೇಕಾಗಿದೆ. ನಗರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಅದರಲ್ಲೂ ಈಗ ಮಳೆಗಾಲ ಆರಂಭವಾಗಿದೆ. ಶುಚಿತ್ವ ಇಲ್ಲದ ಮತ್ತು ಶುದ್ಧವಾದ ಕುಡಿವ ನೀರು ಇಲ್ಲದ ಕಡೆ ಕಾಲರಾ, ಮಲೇರಿಯಾಗಳಂತಹ ರೋಗಗಳು ಹರಡುತ್ತಿವೆ. ನಗರದ ಬಹುತೇಕ ಬಡಾವಣೆಗಳಲ್ಲಿ ಸರಿಯಾದ ರಸ್ತೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೆಲವು ಪ್ರಮುಖ ರಸ್ತೆಗಳಲ್ಲಿ ಹಾಗೂ ಬಡಾವಣೆಗಳಲ್ಲಿ ವಿದ್ಯುತ್ ದೀಪ ಇಲ್ಲದೆ ರಾತ್ರಿ ಹೊತ್ತು ಜನತೆ ಪರದಾಡುವಂತಾಗಿದೆ. ಆದ್ದರಿಂದ ಪೌರಾಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ನಗರದಲ್ಲಿ ಅಗತ್ಯ ಕಾಮಗಾರಿ ಕೈಗೊಂಡು ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಗೊಂದೇನೂರು ಆಗ್ರಹಿಸಿದ್ದಾರೆ.
--
ಮುಳುಗಡೆ ಜಮೀನಿಗೆ ಪರಿಹಾರ ನೀಡಿ
ಯಾದಗಿರಿ: ಸುರಪುರ ತಾಲೂಕಿನ ದೇವಾಪುರ ಗ್ರಾಮದ ದೊಡ್ಡಹಳ್ಳಕ್ಕೆ ವಿದ್ಯುತ್ ಉತ್ಪಾದನೆಗಾಗಿ ಕಂಪನಿಯೊಂದು ತಡೆಗೊಡೆ ನಿರ್ಮಿಸಿದ್ದು, ಅದ ಹಿನ್ನೀರಿನಲ್ಲಿ ನಾಗರಾಳ ಗ್ರಾಮದ ಕೃಷಿ ಜಮೀನು ಮುಳುಗಡೆಯಾಗಿದೆ.
ಜಿಲ್ಲಾಡಳಿತ ಕೂಡಲೇ ಪರಿಹಾರ ದೊರಕಿಸಿಕೊಡಬೇಕೆಂದು ಸೋಮವಾರ ನಾಗರಾಳ ಗ್ರಾಮದ ರೈತರು ಡಿಸಿಗೆ ಮನವಿಪತ್ರ ಸಲ್ಲಿಸಿ ಒತ್ತಾಯಿಸಿದರು.
ಸೌತ್ ವೆಸ್ಟ್ ಹೈಡ್ರೋ ಪವರ್ ಲಿಮಿಟೆಡ್ ಎಂಬ ಕಂಪನಿ ವಿದ್ಯುತ್ ಉತ್ಪಾದನೆಗಾಗಿ ಹಳ್ಳಕ್ಕೆ ತಡೆಗೋಡೆ ನಿರ್ಮಾಣ ಮಾಡಿರುವುದರಿಂದ ಹಳ್ಳದ ಮೇಲ್ಬಾಗದಲ್ಲಿ ಫಲವತ್ತಾದ 120 ಎಕರೆ ಕೃಷಿ ಜಮೀನಿನಲ್ಲಿ ನೀರು ನಿಂತಿದೆ. ಇದರಿಂದಾಗಿ ಎರಡು ವರ್ಷದಿಂದ ಅಲ್ಲಿ ಬೆಳೆ ಬೆಳೆಯಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದೇವೆ.
ಆದ್ದರಿಂದ ಮುಳುಗಡೆಯಾದ ಜಮೀನಿಗೆ ಪರಿಹಾರ ದೊರಕಿಸಿಕೊಡಬೇಕು. ಇಲ್ಲದಿದ್ದರೆ. ಹೋರಾಟ ಹಮ್ಮಿಕೊಳ್ಳಲಾಗುವುದೆಂದು ರೈತರು ಎಚ್ಚರಿಕೆ ನೀಡಿದರು. ಮಾನಯ್ಯ, ಶಾಂತಗೌಡ, ಖಾಜಾಸಾಬ, ತಿರುಪತಿಗೌಡ, ತಿಪ್ಪಣ್ಣ ಪೂಜಾರಿ ರೈತರು ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

