ಕುಡಿವ ನೀರಿನ ಸಮಸ್ಯೆ; ದೂರು
ಕನ್ನಡಪ್ರಭ ವಾರ್ತೆ, ಚಿಂಚೋಳಿ, ಜು.16
ಪಟ್ಟಣದ ಚಂದಾಪುರ ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಹತ್ತಿರದ ಸಾರ್ವಜನಿಕ ಬೋರ್ವೆಲ್ ಸುತ್ತಲೂ ಚರಂಡಿ ನೀರು ನಿಲ್ಲುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸಬೇಕಾಗಿದೆ ಎಂದು ಕಾಲೇಜಿನ ವಿದ್ಯಾರ್ಥಿಗಳು ದೂರಿದ್ದಾರೆ.
ಪಟ್ಟಣದ ಕನಕದಾಸರ ಚೌಕಿನ ಹತ್ತಿರದ ಸಾರ್ವಜನಿಕರಿಗಾಗಿ ಮತ್ತು ವಿದ್ಯಾರ್ಥಿಗಳಿಗೊಸ್ಕರ ಕುಡಿಯುವ ನೀರಿನ ಬೋರ್ವೆಲ್ ಇದೆ. ಪಕ್ಕದಲ್ಲಿನ ಹೋಟೆಲ್ ಮತ್ತು ಚರಂಡಿಯ ನೀರು ಸುತ್ತಲೂ ಅವರಿಸಿಕೊಂಡಿರುವುದರಿಂದ ವಿದ್ಯಾರ್ಥಿಗಳು ಕುಡಿಯುವ ನೀರು ತರಲು ತೀವ್ರ ತೊಂದರೆ ಪಡುತ್ತಿದ್ದಾರೆ.
ಇದರ ಬಗ್ಗೆ ಕಾಲೇಜು ಪ್ರಾಚಾರ್ಯರಿಗೆ ಹಾಗೂ ಮುಖ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಆದರೆ ಯಾರೂ ಇತ್ತ ಗಮನ ಹರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ತಹಸೀಲ್ದಾರರು ಇದರ ಬಗ್ಗೆ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.
ಸೀಮೆಎಣ್ಣೆ ಪ್ರಮಾಣ ಪರಿಷ್ಕರಣೆ
ಗುಲ್ಬರ್ಗ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಮಾಂತರ ಪ್ರದೇಶವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ವಿತರಿಸುತ್ತಿರುವ ಸೀಮೆಎಣ್ಣೆಯ ವಿತರಣಾ ಪ್ರಮಾಣವನ್ನು ಪರಿಷ್ಕರಿಸಿದೆ.
ಜುಲೈ ಮಾಹೆಗೆ ಗ್ರಾಮಾಂತರ ಪ್ರದೇಶದ ಪ್ರತಿ ಅನಿಲ ರಹಿತ ಪಡಿತರ ಚೀಟಿದಾರರಿಗೆ 5 ಲೀಟರ್ನಂತೆ ಪ್ರಮಾಣ ನಿಗದಿಪಡಿಸಲಾಗಿದೆ. ಈ ಹಿಂದೆ 3 ಲೀಟರಿನಂತೆ ಹಂಚಿಕೆ ಮಾಡಲಾಗುತ್ತಿತ್ತು. ಇದನ್ನು ಪರಿಷ್ಕರಿಸಿ 2 ಲೀಟರ್ ಹೆಚ್ಚಿಸಿ ಗ್ರಾಮಾಂತರ ಪ್ರದೇಶದ ಅನಿಲ ರಹಿತ ಪ್ರತಿ ಕಾರ್ಡಿಗೆ 5 ಲೀಟರ್ನಂತೆ ಬಿಡುಗಡೆ ಮಾಡಲಾಗಿದೆ.
ಗ್ರಾಮಾಂತರ ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆಯಬೇಕು ಹಾಗೂ ಈ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಆಯಾ ತಾಲೂಕಿನ ತಹಸೀಲ್ದಾರರು ಮತ್ತು ಆಹಾರ ಶಿರಸ್ತೆದಾರರ ಅಥವಾ ಆಹಾರ ನಿರೀಕ್ಷಕರಿಗೆ ದೂರು ಸಲ್ಲಿಸಬೇಕೆಂದು ಆಹಾರ ಇಲಾಖೆಯ ಉಪನಿರ್ದೇಶಕರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

