ಮೂಲಭೂತ ಸೌಲಭ್ಯಕ್ಕೆ ಆಗ್ರಹ
ಯಾದಗಿರಿ: ಜಿಲ್ಲಾ ಕೇಂದ್ರವಾದ ಬಳಿಕ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಅದಕ್ಕೆ ತಕ್ಕಂತೆ ಸರಿಯಾದ ಮೂಲಭೂತ ಸೌಲಭ್ಯಗಳು ಒದಗಿಸುವುದು ಅಗತ್ಯವಾಗಿದೆ. ಶುದ್ಧ ಕುಡಿಯುವ ನೀರಿನ ಮತ್ತು ನಗರದ ಬಹುತೇಕ ಬಡಾವಣೆಗಳಲ್ಲಿ ರಸ್ತೆ ನಿರ್ಮಾಣವಾಗಬೇಕು ಎಂದು ನಗರಸಭೆ ಮಾಜಿ ಉಪಾಧ್ಯಕ್ಷ ಮಲ್ಲಯ್ಯ ಗೊಂದೆನೋರ ಆಗ್ರಹಿಸಿದ್ದಾರೆ.ನಗರದ ಜನಸಂಖ್ಯೆಗೆ ತಕ್ಕಂತೆ ಸರಿಯಾದ ಮೂಲಭೂತ ಸೌಕರ್ಯಗಳು ಆಗಬೇಕಾಗಿದೆ. ನಗರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಅದರಲ್ಲೂ ಈಗ ಮಳೆಗಾಲ ಆರಂಭವಾಗಿದೆ. ಶುಚಿತ್ವ ಇಲ್ಲದ ಮತ್ತು ಶುದ್ಧವಾದ ಕುಡಿವ ನೀರು ಇಲ್ಲದ ಕಡೆ ಕಾಲರಾ, ಮಲೇರಿಯಾಗಳಂತಹ ರೋಗಗಳು ಹರಡುತ್ತಿವೆ. ನಗರದ ಬಹುತೇಕ ಬಡಾವಣೆಗಳಲ್ಲಿ ಸರಿಯಾದ ರಸ್ತೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೆಲವು ಪ್ರಮುಖ ರಸ್ತೆಗಳಲ್ಲಿ ಹಾಗೂ ಬಡಾವಣೆಗಳಲ್ಲಿ ವಿದ್ಯುತ್ ದೀಪ ಇಲ್ಲದೆ ರಾತ್ರಿ ಹೊತ್ತು ಜನತೆ ಪರದಾಡುವಂತಾಗಿದೆ. ಆದ್ದರಿಂದ ಪೌರಾಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ನಗರದಲ್ಲಿ ಅಗತ್ಯ ಕಾಮಗಾರಿ ಕೈಗೊಂಡು ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಗೊಂದೇನೂರು ಆಗ್ರಹಿಸಿದ್ದಾರೆ.
ಅಂಗನವಾಡಿ ಕಟ್ಟಡ ಹಸ್ತಾಂತರಿಸಲು ಆಗ್ರಹ
ಯಾದಗಿರಿ: ಶಹಾಪುರ ತಾಲೂಕಿನ ವಡಗೇರಾ ಪಂಚಾಯಿತಿ ಕಚೇರಿ ಹಿಂದೆ ಭೂಸೇನಾ ನಿಗಮದ ವತಿಯಿಂದ ಕಟ್ಟಿರುವ ಅಂಗನವಾಡಿ ಕೇಂದ್ರದ ಕಾಮಗಾರಿಯು ಮುಗಿದು ಒಂದು ವರ್ಷವಾದರೂ ಇನ್ನೂ ಕಟ್ಟಡವನ್ನು ಹಸ್ತಾಂತರ ಮಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕರವೇ ಹೋಬಳಿ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಜ್ಮೀರಬಾಷಾ ನೂರಬಾವಿ, ಶೀಘ್ರ ಕಟ್ಟಡ ಹಸ್ತಾಂತರಿಸುವಂತೆ ಆಗ್ರಹಿಸಿದ್ದಾರೆ. ಕಟ್ಟಡದ ಕೆಲವು ಕೋಣೆಗಳಲ್ಲಿ ಖಾಸಗಿ ವ್ಯಕ್ತಿಗಳು ಈಗಾಗಲೆ ಕೃಷಿಗೆ ಸಂಬಂಧಿಸಿದ ಸಲಕರಣೆ, ಹುಲ್ಲು ಇತ್ಯಾದಿಗಳನ್ನು ಸಂಗ್ರಹಿಸಿಟ್ಟಿದ್ದಾರೆ. ಕಟ್ಟಡವನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಗೊಳಿಸಿದರೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಅನುಕೂಲವಾಗುತ್ತದೆ. ಇಲಾಖೆಯವರು ಗಮನಹರಿಸಿ ಆದಷ್ಟು ಬೇಗ ಈ ಕಟ್ಟಡವನ್ನು ಹಸ್ತಾಂತರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಕೋಲಿ ಸಭೆಯಲ್ಲಿ ಭಾಗವಹಿಸಿ
ಯಾದಗಿರಿ: ಟೋಕರಿ ಕೋಲಿ ಇನ್ನಿತರ ಪರ್ಯಾಯ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹಿಸಿ ಬೆಂಗಳೂರು ಚಲೋ ಕಾರ್ಯಕ್ರಮ ಯಶಸ್ಸಿಗಾಗಿ ಜು.17ರಂದು ಗುಲ್ಬರ್ಗದಲ್ಲಿ ಹಮ್ಮಿಕೊಂಡಿರುವ ಪೂರ್ವಭಾವಿ ಸಭೆಗೆ ಜಿಲ್ಲೆಯಿಂದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

