ಗುಲ್ಬರ್ಗಾ

ಅಪಘಾತ: ಪರಿಹಾರ ನೀಡಲು ಒತ್ತಾಯ

Published On :

ಯಾದಗಿರಿ: ಗುಲ್ಬರ್ಗ ಜಿಲ್ಲೆ ಚಿತ್ತಾಪುರ ತಾಲೂಕಿನ ಯಾಗಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಫತ್ತುನಾಯಕ ತಾಂಡದ 8 ಜನರ ಕುಟುಂಬಕ್ಕೆ ಮುಖ್ಯಮಂತ್ರಿಗಳು ಕೂಡಲೇ ತಲಾ 5 ಲಕ್ಷ ರು. ಪರಿಹಾರ ನೀಡಬೇಕೆಂದು ಅಖಿಲ ಭಾರತ ಬಂಜಾರ ಸೇವಾ ಸಂಘದ ಜಿಲ್ಲಾ ಘಟಕದ ನಿಯೋಗ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿ ಒತ್ತಾಯಿಸಿತು. ಮೃತಪಟ್ಟವರು ಬಡವರಾಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಪಡಿತರ ಚೀಟಿ ಪಡೆಯಲು ಟಂಟಂನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಇತರೇ 7 ಜನರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣ ನೆರವಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ. ನಿಯೋಗದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಅಮರೇಶ ರಾಠೋಡ್, ಜಿಲ್ಲಾ ಉಪಾಧ್ಯಕ್ಷ ಜನಾರ್ಧನ ರಾಠೋಡ್, ಹಿರಾಸಿಂಗ ಪವಾರ್, ಸುಭಾಶ ರಾಠೋಡ್, ರವಿ ಮುದ್ನಾಳ, ಲಕ್ಷ್ಮಣ ಪವಾರ, ಸುರೇಶ ಬಸವಂತಪುರ, ಸೋಮು ಮುದ್ನಾಳ, ಮನ್ನು ಚವ್ಹಾಣ, ಪರಶುರಾಮ ಚವ್ಹಾಣ ಇದ್ದರು.
ಎಸ್.ಡಿ. ಗೋನಾಳ; ವ್ಯಕ್ತಿ ಕೊಲೆ
ಸುರಪುರ: ತಾಲೂಕಿನ ಆಲ್ದಾಳ ಕ್ರಾಸ್ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಮಂಗಳವಾರ ಜರುಗಿದೆ.ಕೊಲೆಯಾದ ವ್ಯಕ್ತಿ ಎಸ್.ಡಿ. ಗೋನಾಳ ಗ್ರಾಮದ ಕನಕಪ್ಪ ಲಕ್ಕಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಕೊಲೆಗೆ ಹಳೆಯ ವೈಷ್ಯಮೆವೇ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ವಂಶಿಕೃಷ್ಣ, ಡಿವೈಎಸ್ಪಿ ಎಸ್.ಬಿ. ಕಟ್ಟಿಮನಿ, ಪಿಐ ರಾಜಕುಮಾರ ವಾಜಂತ್ರಿ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಂಟಂ ಪಲ್ಟಿ; ವ್ಯಕ್ತಿ ಸಾವು
ಸುರಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆ ಇಳಿಜಾರಿನಲ್ಲಿ ಬುಧವಾರ ಟಂಟಂ ಪಲ್ಟಿಯಾಗಿ ಬಾದ್ಯಾಪುರ ಗ್ರಾಮದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹಣಮಂತ ಚಂದಪ್ಪ ಹಾವಿನ್(65) ಮೃತಪಟ್ಟ ವ್ಯಕ್ತಿ. ಗಂಭೀರವಾಗಿ ಗಾಯಗೊಂಡ ಮೃತನ ಸಹೋದರಿ ದೇವಕೆಮ್ಮ ಕೋಟೆಪ್ಪ ಜಾಲಿಬೆಂಚಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಲ್ಬರ್ಗ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇವರು ವಾಂತಿ-ಭೇದಿಯಿಂದ ಸುರಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮ್ಮ ಸಂಬಂಧಿಕರೊಬ್ಬರ ಯೋಗಕ್ಷೇವು ವಿಚಾರಿಸಿಕೊಂಡು ಟಂಟಂನಲ್ಲಿ ವಾಪಸ್ ಗ್ರಾಮಕ್ಕೆ ಮರಳುತ್ತಿದ್ದಾಗ ಆಸ್ಪತ್ರೆಯ ಸಮೀಪವೇ ಟಂಟಂ ಬ್ರೇಕ್ ಫೇಲಾಗಿ ಈ ದುರ್ಘಟನೆ ಜರುಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.