ಮಕ್ಕಳ ಆರೋಗ್ಯ ರಕ್ಷಣೆ ಎಲ್ಲರ ಹೊಣೆ
ಸುರಪುರ: ಅಪೌಷ್ಟಿಕ ಆಹಾರ ಸೇವನೆಯಿಂದ ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಾಗುತ್ತಿದೆ. ಮಕ್ಕಳ ಆರೋಗ್ಯ ರಕ್ಷಣೆ ಮಾಡುವುದು ಕೇವಲ ಪಾಲಕರಿಗೆ ಮಾತ್ರ ಸೀಮಿತವಾಗಿಲ್ಲ. ಇದಕ್ಕೆ ಎಲ್ಲರ ಹೊಣೆಗಾರಿಕೆಯಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ. ನಾಯಕ ತಿಳಿಸಿದರು.
ಇಲ್ಲಿಯ ಕನ್ಯಾ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ತಾಲೂಕು ಆಡಳಿತ ಏರ್ಪಡಿಸಿದ್ದ ಕಬ್ಬಿಣಾಂಶ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಲಬೆರಕೆ ಆಹಾರ ಹಾಗೂ ತರಕಾರಿಗಳಿಗೆ ಕಿಮಿನಾಶಕ ಔಷಧ ಬಳಸುವುದರಿಂದ ಆಹಾರದಲ್ಲಿ ಪೌಷ್ಟಿಕತೆ ಕಡಿಮೆ ಪ್ರಮಾಣದಲ್ಲಿ ದೊರಕುತ್ತಿದೆ.
ಹೀಗಾಗಿ ಅನೇಕ ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಮಕ್ಕಳಿಗೆ ಫೋಲಿಕ್ ಆ್ಯಸಿಡ್ ಮಾತ್ರೆ ನೀಡುವುದು ಅವಶ್ಯಕವಾಗಿದೆ ಎಂದರು.
ತರಕಾರಿಗಳಲ್ಲಿ ಹೆಚ್ಚಾಗಿ ಕಬ್ಬಿಣ ಪೋಷಕಾಂಶ ಇರುತ್ತದೆ. ಕಾರಣ ಮಕ್ಕಳಿಗೆ ದಿನಾಲು ತರಕಾರಿಯುಕ್ತ ಆಹಾರ ನೀಡಬೇಕು. ಇದರಿಂದ ಮಕ್ಕಳಲ್ಲಿ ರಕ್ತಹೀನತೆ ಕಡಿಮೆಯಾಗುತ್ತದೆ. ಆರೋಗ್ಯದಲ್ಲಿ ಗಣನೀಯ ಬದಲಾವಣೆಯಾಗುತ್ತದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ತಹಸೀಲ್ದಾರ್ ಮೊಹ್ಮದ ಗೌಸುದ್ದೀನ್ ಮಾತನಾಡಿದರು. ತಾಪಂ ಇಒ ಪ್ಯಾರೆ ಮೊಹ್ಮದ ಕುತುಬುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ವಿ. ಕೆಂಪರಂಗಯ್ಯ ಪ್ರಾಸ್ತಾವಿಕ ಮಾತನಾಡಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರಕಾಂತ ಕೊಣ್ಣೂರು, ಶಾಲಾ ಮುಖ್ಯಗುರು ವೆಂಕಟೇಶ ಗುಡಿ ಇದ್ದರು. ಸಿಆರ್ಸಿ ಚನ್ನಪ್ಪ ಹೂಗಾರ ಸ್ವಾಗತಿಸಿದರು. ಮಹೇಶ ಹುಜರತ್ತಿ ನಿರೂಪಿಸಿದರು. ಸೋಮರಡ್ಡಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

