ಗುಲ್ಬರ್ಗಾ

ನಾಲವಾರ ಅಪಘಾತ: ಮೃತಪಟ್ಟವರು 7ಕ್ಕೆ ಏರಿಕೆ

Published On :

ಗುಲ್ಬರ್ಗ/ಶಹಾಬಾದ್: ಚಿತ್ತಾಪುರ ತಾಲೂಕಿನ ನಾಲವಾರ ಬಳಿ ಯಾದಗಿರಿ ರಸ್ತೆಯಲ್ಲಿ ಮಂಗಳವಾರ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಈಗ ಏಳಕ್ಕೆ ಏರಿದೆ.
ಟಂಟಂಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟಿದ್ದರು. ಉಳಿದಂತೆ ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಬುಧವಾರ ಬುದ್ದ್ಯಾ ಚವ್ಹಾಣ (60) ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಮೃತಪಟ್ಟವರೆಲ್ಲರೂ ಚಿತ್ತಾಪುರ ತಾಲೂಕಿನ ಪತ್ತುನಾಯಕ ತಾಂಡಾದ ನಿವಾಸಿಗಳೆಂದು ತಿಳಿದುಬಂದಿದೆ.
ತಾಂಡಾದ ಒಟ್ಟು 15 ಜನರು ಪಡಿತರ ಚೀಟಿಗಾಗಿ ಬೆಳಗ್ಗೆ ಚಿತ್ತಾಪುರದ ನೆಮ್ಮದಿ ಕೇಂದ್ರಕ್ಕೆ ಹೋಗಿದ್ದರು. ಚಿತ್ತಾಪುರದಿಂದ ಹಿಂದಿರುಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಆಗ ಸ್ಥಳದಲ್ಲಿಯೇ ಮೋತಿಲಾಲ್ ಹೀರೂ ಚವ್ಹಾಣ (35), ಬಾಂದಿಬಾಯಿ ರೇಪಲಾ ಚವ್ಹಾಣ (50), ಜೀಜೀಬಾಯಿ ಬಾಬು ರಾಠೋಡ (51), ಗೋಪಾಲ್ ರೇಪಲಾ ಚವ್ಹಾಣ (50), ಸುನೀತಾ ಗೋವಿಂದ ಚವ್ಹಾಣ (4) ಮತ್ತು ಟಂಟಂ ಚಾಲಕ ವಿಜಯಕುಮಾರ ಅಬ್ಬ್ಯಾ ಚವ್ಹಾಣ (30) ಮೃತಪಟ್ಟಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.