ರಸ್ತೆ, ಚರಂಡಿಗೆ ಒತ್ತಾಯಿಸಿ ರಸ್ತೆತಡೆ
ಗುಲ್ಬರ್ಗ: ನಗರದಲ್ಲಿ ಹದಗೆಟ್ಟಿರುವ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಹೈ.ಕ. ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ ನೇತೃತ್ವದಲ್ಲಿ ಎಲ್ಲ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಬುಧವಾರ ಕಿರಾಣಾ ಬಜಾರ ರಸ್ತೆತಡೆ ನಡೆಸಿದರು.
ನಗರದ ವಾಣಿಜ್ಯ ಚಟುವಟಿಕೆಗಳ ಪ್ರಮುಖ ರಸ್ತೆಗಳಾದ ಭಾಂಡೆ ಬಜಾರ ಮತ್ತು ಕಿರಾಣಾ ಬಜಾರಗಳಲ್ಲಿ ರಸ್ತೆ ಅಗಲೀಕರಣದ ಕಾರ್ಯವನ್ನು ಜಿಲ್ಲಾಡಳತವು ಪೂರ್ತಿಗೊಳಿಸಿ ಮೂರುವರೆ ವರ್ಷಗಳು ಗತಿಸಿದರೂ ಕೂಡ ಈ ಭಾಗದಲ್ಲಿ ರಸ್ತೆ ದುರಸ್ತಿ ಮತ್ತು ಒಳಚರಂಡಿಯ ಕಾರ್ಯ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲವಾರು ಬಾರಿ ಸಂಬಂಧಪಟ್ಟ ಮಹಾನಗರ ಪಾಲಿಕೆ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು ಮಹಾನಗರ ಪಾಲಿಕೆ ಆಯುಕ್ತರು ಬಂದು ಭರವಸೆ ನೀಡುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಾಗ ಆಯುಕ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಹದಗೆಟ್ಟರುವ ರಸ್ತೆ ಮತ್ತು ಒಳಚರಂಡಿ ವೀಕ್ಷಿಸಿ ಕೂಡಲೇ ಕಾಮಗಾರಿ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಶಶಿಕಾಂತ ಪಾಟೀಲ್, ಗೌರವ ಕಾರ್ಯದರ್ಶಿ ಬಸವರಾಜ ಹಡಗಿಲ್, ಖಜಾಂಚಿ ರಾಜಶೇಖರ ಕಡಗಂಚಿ, ಆಡಳಿತ ಮಂಡಳಿಯ ಸದಸ್ಯರು, ವಿವಿಧ ಸಂಘ- ಸಂಸ್ಥೆಗಳ ಪ್ರತಿನಿಧಿಗಳು, ವ್ಯಾಪಾರಸ್ಥರು, ಮಹಾನಗರ ಪಾಲಿಕೆ ಮಾಜಿ ಸದಸ್ಯ ಸೂರಜ ತಿವಾರಿ, ಶರಣು ಮೋದಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

