ಗುಲ್ಬರ್ಗಾ

ಕಿರುಕುಳ: ಮಹಿಳೆ ಆತ್ಮಹತ್ಯೆ

Published On :

ಚಿಂಚೋಳಿ: ತಾಲೂಕಿನ ಗಡಿಲಿಂಗದಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಗಂಡನ ಕಿರುಕುಳ ತಾಳದೇ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಜಗದೇವಿ ಗಂಡ ಶಿವಲಿಂಗಪ್ಪ ಹಳಿಮನಿ (30) ಎಂಬ ಮಹಿಳೆ ಸಾವಗೀಡಾಗಿದ್ದಾಳೆ. ಮೃತ ಮಹಿಳೆಯೂ ತನ್ನ ಇಬ್ಬರು ಮಕ್ಕಳನ್ನು ಅಕ್ಕನ ಮನೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಬಿಡುವಂತೆ ತನ್ನ ಗಂಡನಿಗೆ ತಿಳಿಸಿದ್ದಾಳೆ. ಆದರೆ ಆಕೆಯ ಗಂಡ ನಮ್ಮ ಊರಿನಲ್ಲಿಯೇ ಶಾಲೆಗೆ ಕಳುಹಿಸಿತ್ತೆನೆಂದು ಪಟ್ಟು ಹಿಡಿದು ಜಗಳ ತೆಗೆದಿದ್ದಾನೆ. ಇದೇ ಕಾರಣಕ್ಕಾಗಿ ಪತ್ನಿ ಜಗದೇವಿ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಸೀಮೆಎಣ್ಣಿ ಸುರಿಸಿಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾಳೆ.
ತೀವ್ರವಾಗಿ ಗಾಯಗೊಂಡಿರುವ ಆಕೆಯನ್ನು ಗುಲ್ಬರ್ಗ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ. ಮೃತಳ ತಾಯಿ ಸಿದ್ದಮ್ಮ ಗಂಡ ಶಾಂತಪ್ಪ ಅವರು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸ್‌ಐ ಸುರೇಶ ಬೆಂಡೆಗುಂಬಳ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.